ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಡಿ ವಿವಾದ ತಾರಕಕ್ಕೆ: ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಬಸ್ಸುಗಳಿಗೆ ಮರಾಠಿಯಲ್ಲಿ ಬರೆದು ಆಕ್ರೋಶ

Twitter
Facebook
LinkedIn
WhatsApp
ಗಡಿ ವಿವಾದ ತಾರಕಕ್ಕೆ: ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಬಸ್ಸುಗಳಿಗೆ ಮರಾಠಿಯಲ್ಲಿ ಬರೆದು ಆಕ್ರೋಶ

ಮುಂಬೈ: ಮಹಾರಾಷ್ಟ್ರ ಮತ್ತು ಕರ್ನಾಟಕ ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿದ್ದಂತೆ, ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯನ್ನೂ ಸಹ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಗಡಿ ಭಾಗದಲ್ಲಿರುವ ಮರಾಠಿಗರಿಗೆ ನ್ಯಾಯ ಒದಗಿಸಲು ಸರ್ಕಾರ ಸಕಲ ಪ್ರಯತ್ನವನ್ನೂ ಮಾಡುತ್ತಿದೆ. ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯೂ ಬೇರೆಯವರ ಪಾಲಾಗಲು ನಾವು ಬಿಡುವುದಿಲ್ಲ. 40 ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.

ಇದಕ್ಕೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೇಲೆ ಹರಿಹಾಯ್ದಿದ್ದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಬೊಮ್ಮಾಯಿಯವರಿಗೆ ಈಗೇನು ದೆವ್ವ ಹಿಡಿದಿದೆಯೇ, ಈಗ ಗಡಿ ವಿವಾದ ಬಗ್ಗೆ ಮಾತನಾಡುತ್ತಾರೆ. ಮಹಾರಾಷ್ಟ್ರದ 40 ಗ್ರಾಮಗಳು ಬೇಕೆಂದು ಈಗ ಹಠಾತ್ತಾಗಿ ಕೇಳುವ ಬೊಮ್ಮಾಯಿಯವರಿಗೆ ದೆವ್ವ ಹಿಡಿದಿದೆಯೇ ಎಂದು ಟೀಕಿಸಿದ್ದರು.

ಎನ್ ಸಿಪಿ ನಾಯಕ ಅಜಿತ್ ಪವಾರ್ ಕರ್ನಾಟಕಕ್ಕೆ ಸಿಎಂ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಸರಿಯಾದ ಉತ್ತರ ನೀಡಬೇಕೆಂದು ಹೇಳಿದ್ದಾರೆ. ಈ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಕೂಡ ಅಜಿತ್ ಪವಾರ್ ಒತ್ತಾಯಿಸಿದ್ದಾರೆ. 

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಗಡಿ ವಿವಾದ ಕುರಿತು ನೀಡುತ್ತಿರುವ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಜನರನ್ನು ಕೆರಳಿಸುವಂತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ದೇವೇಂದ್ರ ಫಡ್ನವೀಸ್ ಹೇಳಿಕೆ ಪ್ರಚೋದನಕಾರಿಯಾಗಿದೆ. ಗಡಿ ವಿವಾದದಲ್ಲಿ ನಮ್ಮ ಸರ್ಕಾರ ನೆಲ, ಜನ, ಗಡಿಭಾಗದ ರಕ್ಷಣೆಗೆ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು.

ನಿನ್ನೆ ಹೇಳಿಕೆ ನೀಡಿದ್ದ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ಭಾಗದಲ್ಲಿರುವ ಯಾವುದೇ ಗ್ರಾಮಗಳು ಕರ್ನಾಟಕಕ್ಕೆ ಹೋಗಲು ಬಿಡುವುದಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಬಲವಾಗಿ ಹೋರಾಡಲಿದ್ದು, ಬೆಳಗಾವಿ ಕಾರವಾರ ನಿಪ್ಪಾಣಿ ಭಾಗ ಸೇರಿದಂತೆ ಮರಾಠಿಗರು ಮಾತನಾಡುವ ಯಾವುದೇ ಗ್ರಾಮಗಳು ಕರ್ನಾಟಕ ಪಾಲಾಗಲು ಬಿಡುವುದಿಲ್ಲ ಎಂದಿದ್ದರು. 

ಸಿಎಂ ಬೊಮ್ಮಾಯಿ ಹೇಳಿಕೆ ವಿರುದ್ಧ ಪ್ರತಿಭಟನೆ: ಗಡಿ ವಿವಾದ ಕುರಿತು ಕರ್ನಾಟಕ ಸಿಎಂ ಬೊಮ್ಮಾಯಿ ನೀಡಿರುವ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಪ್ರತಿಭಟನೆ ನಡೆಸಿದ್ದು ಕರ್ನಾಟಕ ಬಸ್ಸಿಗೆ ಬಣ್ಣ ಬಳಿದು, ಮರಾಠಿಯಲ್ಲಿ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ