ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರ್ಭಪಾತಕ್ಕೆ ಯತ್ನ – 19ರ ಯುವತಿ ಸಾವು

Twitter
Facebook
LinkedIn
WhatsApp
file7kz3ooflvhwsmtlldoy1679439394 4

ಚಂಡೀಗಢ: ಅಕ್ರಮ ಗರ್ಭಪಾತಕ್ಕೆ (Abortion) ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯವತಿಯು (Woman) ಸಾವನ್ನಪ್ಪಿದ ಘಟನೆ ಹರಿಯಾಣದ (Haryana) ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ.

ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ಈ ಘಟನೆ ನಡೆದಿದೆ. ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಕೆಯನ್ನು ಗರ್ಭಪಾತಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಆಕೆಗೆ ಗರ್ಭಪಾತಕ್ಕೆ ಪ್ರಯತ್ನಿಸಲಾಗಿದೆ. ಆದರೆ ಇದರಿಂದಾಗಿ ಯುವತಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಅದಾದ ಬಳಿಕ ಆಕೆಯ ಸ್ಥಿತಿ ಹದಗೆಟ್ಟಿರುವುದನ್ನು ಕಂಡು, ಪೋಷಕರು ಆಕೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಕರುಳುಗಳು ಹೊರಬಂದಿದ್ದು, ಗರ್ಭಾಶಯದಲ್ಲಿ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಮೂತ್ರಪಿಂಡಗಳು ಸಹ ವಿಫಲವಾಗಿತ್ತು. 

ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಯುವತಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ