ದಿನಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆ ಏರಿಸಲಾಗಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ 1,000 ರೂ. ದಾಟಿದೆ. ಅಲ್ಲದೇ ವಾಣಿಜ್ಯ ಎಲ್ಪಿಜಿ ಗ್ಯಾಸ್ ದರವವನ್ನೂ ಸಹ ಏರಿಕೆ ಮಾಡಲಾಗಿದೆ. ಇಂದು (ಗುರುವಾರ)ದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3 ರೂಪಾಯಿ 50 ಪೈಸೆ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ ನಷ್ಟು ಏರಿಸಲಾಗಿದೆ. ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಲಿದೆ. ಈ ಮೊದಲು 999.50 ರೂಪಾಯಿಗಳಾಗಿತ್ತು.
ಈ ಮೂಲಕ ಒಂದೇ ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್ಗಳ ಬೆಲೆ ಎರಡನೇ ಬಾರಿ ಏರಿಕೆ ಕಂಡಂತಾಗಿದೆ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 50 ರೂಪಾಯಿಗಳಷ್ಟು ಬೆಲೆ ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನೂ ಹೆಚ್ಚಳ ಮಾಡಲಾಗಿತ್ತು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?