ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಳೆಯರ ಬಳಗ ಸೇವಾ ಸಂಸ್ಥೆ ನೈನಾಡು ವತಿಯಿಂದ ಗೆಳೆಯರೇ ಸೇರಿ ನಿರ್ಮಿಸಿದ ಪಾರ್ಕ್ ಲೋಕಾರ್ಪಣೆ.

Twitter
Facebook
LinkedIn
WhatsApp
ಗೆಳೆಯರ ಬಳಗ ಸೇವಾ ಸಂಸ್ಥೆ ನೈನಾಡು ವತಿಯಿಂದ ಗೆಳೆಯರೇ ಸೇರಿ ನಿರ್ಮಿಸಿದ ಪಾರ್ಕ್ ಲೋಕಾರ್ಪಣೆ.

ಗೆಳೆಯರ ಬಳಗ ಸೇವಾ ಸಂಸ್ಥೆಯ ವತಿಯಿಂದ ಪಿಲಾತಬೆಟ್ಟು ಗ್ರಾಮದ ಕೊಳಕ್ಕೆ ಬೈಲು ಎಂಬಲ್ಲಿ ನಿರ್ಮಿಸಿದ ಮಕ್ಕಳ ಉದ್ಯಾನವನದ ಉದ್ಘಾಟನೆಯನ್ನು ಸ್ಥಳ ದಾನಿಗಳಾದ ಮ್ಯಾಕ್ಸಿಮ್ ರೋಡ್ರಿಗಸ್ ಮತ್ತು ಲ್ಯಾನ್ಸಿ ರೋಡ್ರಿಗಸ್ ಇವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಸಿಯನ್ನು ನೆಡುವುದರ ಮೂಲಕ ಗೆಳೆಯರ ಬಳಗ ಸೇವಾ ಸಂಸ್ಥೆಯ ಅಧಿಕೃತ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ಶ್ರೀಮತಿ ಸೌಮ್ಯ ಜೆ ಡಿಜಿಟಲ್‌ ಯುಗದಲ್ಲಿ ಕಳೆದುಹೋಗುತ್ತಿರುವ ಮಕ್ಕಳ ಬಾಲ್ಯವನ್ನು ಉಳಿಸಲು ಉದ್ಯಾನವನದ ಮಹತ್ವವನ್ನು ತಿಳಿಸಿ ಶುಭಕೋರಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಜೊಯೆಲ್ ಲೋಬೊರವರು ಸಂಘಕ್ಕೆ ಶುಭಕೋರಿ, ಸಂಘದ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಥಳೀಯರ ಪರವಾಗಿ ಸಂಘದ ನಿರ್ದೇಶಕರಿಗೆ ಶಾಲು ಹೊದಿಸಿ ಸನ್ಮಾನಿಸಿದರು. .

ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಸಾಂಕೇತಿಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಂತ ಫ್ರಾನ್ಸಿಸ್ ಅಸಿಸಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾದರ್ ರೊಕ್ಕಿ ರವಿ ಫರ್ನಾಂಡಿಸ್ ಅವರು ವಹಿಸಿ ಆಶೀರ್ವಚನ ನೀಡಿದರು. ಬೆಳ್ತಂಗಡಿ ತಾಲೂಕು ಸೇವಾದಳದ ಅಧ್ಯಕ್ಷರಾದ ಶ್ರೀ ಫ್ರಾನ್ಸಿಸ್ ವಿ ವಿ ,ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರ್ಷಿಣಿ ಪುಷ್ಪಾನಂದ, ಉಪಾಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಹೆಗಡೆ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಉಡುಪ, ಪಿಂಟೋ ಬೇಕರಿ ನಯನಾಡು ಇದರ ಮಾಲೀಕರಾದ ಶ್ರೀ ಸಿಲ್ವೆಸ್ಟರ್ ಪಿಂಟೊ, ಇರ್ವತ್ತೂರು ಗ್ರಾಮ ಪಂಚಾಯತ್ ಪಿಡಿಒ ಶ್ರೀ ಪ್ರಶಾಂತ್ ಜೋಯೆಲ್, ಶ್ರೀ ಮಂಜಪ್ಪ ಮೂಲ್ಯ , ಪಂಚಾಯತ್ ಸದಸ್ಯರಾದ ಶ್ರೀ ನೆಲ್ವಿಸ್ಟರ್ ಪಿಂಟೊ, ಶ್ರೀಮತಿ ಪುಷ್ಪಲತಾ, ಶ್ರೀಮತಿ ಲೀಲಾವತಿ, ಗೆಳೆಯರ ಬಳಗದ ಸಂಚಾಲಕರಾದ ಶ್ರೀ ಏಲಿಯಾಸ್ ಕ್ರಾಸ್ತ ಮುಂತಾದವರು ಉಪಸ್ಥಿತರಿದ್ದು ಶುಭ ಕೋರಿದರು.ಸಂಘದ ನಿರ್ದೇಶಕರಾದ ಶ್ರೀ ವಿನ್ಸೆಂಟ್ ಫೆರ್ನಾಂಡಿಸ್ ವರದಿ ವಾಚಿಸಿದರು. ಗೆಳೆಯರ ಬಳಗ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಾನ್ ಪ್ರವೀನ್ ಕ್ರಾಸ್ತ ಸ್ವಾಗತಿಸಿ ರೀವನ್ ಲೋಬೊರವರು ವಂದಿಸಿದರು. ಎಮರ್ಸನ್ ಕ್ರಾಸ್ತ ಕಾರ್ಯಕ್ರಮ ನಿರ್ವಹಿಸಿದರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು