ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜುಲೈ ಐದರವರೆಗೆ ಕೊಡಗಿನಲ್ಲಿ ಲಾಕ್ಡೌನ್ ಕುರಿತ ನೀತಿಗಳನ್ನು ಯಥಾವತ್ತಾಗಿ ಮುಂದುವರಿಸಲಾಗಿದೆ:ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Twitter
Facebook
LinkedIn
WhatsApp

ಮಡಿಕೇರಿ:ಸರ್ಕಾರದ ಇತ್ತೀಚಿನ ಆದೇಶ , ಮಾರ್ಗಸೂಚಿಯಂತೆ ಕೋವಿಡ್ ಪಾಸಿಟಿವಿಟಿ ದರದಂತೆ ಕೊಡಗು ಜಿಲ್ಲೆಯು 2ನೇ ವರ್ಗದಲ್ಲಿ ಇರುತ್ತದೆ. ಆದಾಗ್ಯೂ ಕೊಡಗು ಜಿಲ್ಲೆಯಲ್ಲಿ ಕೋವಿಡ್ – 19 ಸೋಂಕನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಗ್ರಹಿಸುವ ನಿಟ್ಟಿನಲ್ಲಿ ಸರ್ಕಾರದ ಲಾಕ್ಡೌನ್ ಆದೇಶವನ್ನು ಗಮನದಲ್ಲಿರಿಸಿಕೊಂಡು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡ ಅಂಶಗಳಂತೆ ಹಾಲಿ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಾವಳಿಯನ್ನು ದಿನಾಂಕ 05.07.2021ರ ಬೆಳಗ್ಗೆ 6:00 ಗಂಟೆಯವರೆಗೆ ಯಥಾವತ್ತಾಗಿ ಜಾರಿಯಲ್ಲಿರುವಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.

ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆಗಳನ್ನು, ಹಾಪ್ ಕಾಮ್ಸ್ ಮಳಿಗೆಗಳನ್ನು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ.

ಕೃಷಿ ಪರಿಕರವಾದ ರಸಗೊಬ್ಬರವನ್ನು ರೈತರು ಈಗಾಗಲೇ ನಿಗದಿಪಡಿಸಿರುವ ದಿನಗಳಲ್ಲಿ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ನಿಗದಿಪಡಿಸಿದ ಸಮಯದಲ್ಲಿ (ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 01.00) ರಸೀದಿ ಪಡೆದು ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿಯನ್ನು ಹೊಂದಿರತಕ್ಕದ್ದು.

ಜಿಲ್ಲೆಯ ಸಾರ್ವಜನಿಕರಿಗೆ ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್ಕೋಟ್, ಛತ್ರಿ, ಟಾರ್ಪಲ್ಗಳು, ಬಟ್ಟೆಬರೆ, ಚಪ್ಪಲಿ, ಗಮ್ ಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ತೆರೆಯಲು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಿದೆ.

ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ತೆರೆಯಲು ಅನುಮತಿಸಿದೆ. ಸ್ಟಾಂಡ್ ಅಲೋನ್ ಹಾಲಿನ ಬೂತ್ಗಳು, ದಿನಪತ್ರಿಕೆಗಳ ಸೆಗ್ರಿಗೇಷನ್ ಮತ್ತು ವಿತರಣೆಗೆ ಪ್ರತಿದಿನ ಬೆಳಿಗ್ಗೆ 06.00 ಗಂಟೆಯಿಂದ ಬೆಳಗ್ಗೆ 10.00 ಗಂಟೆಯವರೆಗೆ ಅನುಮತಿಸಿದೆ.

ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್ ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರತಕ್ಕದ್ದು.

ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ / ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ / ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಆದಾಗ್ಯೂ ಸಹ ಸದರಿಯವರು ಆಯಾ ಕಚೇರಿಯಿಂದ ನೀಡಲ್ಪಟ್ಟ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು ಮತ್ತು ಪರಿಶೀಲನೆ ವೇಳೆ ಹಾಜರುಪಡಿಸತಕ್ಕದ್ದು. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು , ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 188, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಇಂದು ಜಿಲ್ಲಾಧಿಕಾರಿ ಚರುಲತ ಸೋಮಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು