ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜುಲೈ ಕೊನೆಯ ವಾರ ರಾಜ್ಯದಲ್ಲಿ ಶಾಲಾರಂಭ ..?

Twitter
Facebook
LinkedIn
WhatsApp
ಜುಲೈ ಕೊನೆಯ ವಾರ ರಾಜ್ಯದಲ್ಲಿ ಶಾಲಾರಂಭ ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾರಂಭದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಜುಲೈ ಕೊನೆಯ ವಾರದಲ್ಲಿ ಶಾಲೆಗಳು ಆರಂಭವಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಶಾಲೆಯಿಲ್ಲದೇ ಒಂದು ವರ್ಷ ಕಳೆದು ಹೋಗಿದೆ. ಆದ್ರೆ ಈ ಬಾರಿಯೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾರಂಭ ಗೊಂದಲದಲ್ಲಿದೆ. ಖಾಸಗಿ ಶಾಲೆಗಳು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ಶಿಕ್ಷಣವನ್ನು ನೀಡಲಾಗುತ್ತಿದ್ರೆ, ಸರಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಚಂದನ ವಾಹಿನಿಯ ಜೊತೆಗೆ ಇತರ ಪರ್ಯಾಯ ಮಾರ್ಗಗಳ ಮೂಲಕ ಪಾಠಗಳನ್ನು ಬೋಧನೆ ಮಾಡಲಾಗುತ್ತಿದೆ.
ಈ ನಡುವಲ್ಲೇ ರಾಜ್ಯದಲ್ಲಿ ಶಾಲಾರಂಭ ಮಾಡಬೇಕೆಂಬ ಕೂಗೂ ಕೆಲವರಿಂದ ಕೇಳಿಬರುತ್ತಿದ್ರೆ, ಬಹುತೇಕ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

ಈ ನಡುವಲ್ಲೇ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್‌ ತಾಂತ್ರಿಕ ಸಮಿತಿ, ತಜ್ಞರು ನೀಡಿರುವ ಸಲಹೆಯನ್ನು ಆಧರಿಸಿ ಶಾಲೆಗಳನ್ನು ತೆರೆಯುವಂತೆ ಮನವಿ ಮಾಡಿದೆ.
ರಾಜ್ಯ ಸರಕಾರ ಮಕ್ಕಳ ಸುರಕ್ಷತೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಾಯೋಗಿಕವಾಗಿ ಪೋಷಕರಿಗೆ ಮನವರಿಕೆ ಮಾಡಿಕೊಟ್ರೆ ಮಕ್ಕಳನ್ನು ಶಾಲೆಗೆ ಕಳುಹಿಸುವ ಸಾಧ್ಯತೆಯಿದೆ. ಒಂದು ಮೂಲಗಳ ಪ್ರಕಾರ ಜುಲೈ ಅಂತ್ಯಕ್ಕೆ ಶಾಲೆಗಳು ಆರಂಭವಾಗಲಿದೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಕೋವಿಡ್‌ ತಾಂತ್ರಿಕ ಸಮಿತಿ ನೀಡಿದ ಸಲಹೆಯನ್ನು ಅಷ್ಟು ಸುಲಭಕ್ಕೆ ಜಾರಿಗೆ ತರೋದು ಸರಕಾರಕ್ಕೆ ಕಷ್ಟಸಾಧ್ಯ.
ಈ ನಡುವಲ್ಲೇ ರಾಜ್ಯದಲ್ಲಿ ಡೆಲ್ಟಾ ಫ್ಲಸ್‌ ಸೋಂಕಿಗೆ ಬಾಲಕನೋರ್ವ ಬಲಿಯಾಗಿದ್ದಾನೆ. ಅಲ್ಲದೇ ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಜೊತೆಗೆ ನೆರೆಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಏರಿಕೆಯಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು