ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್ ಪಕ್ಷದ 11 ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

Twitter
Facebook
LinkedIn
WhatsApp
Two died KSRTC Bus and Bike accident at Mudhol taluk in Bagalkot 1

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನೆಲಮಂಗಲದ ಜೆಡಿಎಸ್ ನಾಯಕರು ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದು, 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನೆಲಮಂಗಲ ನಗರಸಭೆಯ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್, ರಾಜಮ್ಮ ಪಿಳ್ಳಪ್ಪ, ಆನಂದ್, ಆಂಜಿನಪ್ಪ, ಅಂಜನಮೂರ್ತಿ( ಪಾಪಣಿ), ದಾಕ್ಷಾಯಿಣಿ ರವಿ ಕುಮಾರ್, ಪ್ರಸಾದ್, ಚೇತನ್, ಪುಷ್ಪಲತಾ ಮಾರೇಗೌಡ, ಭಾರತಿ ಬಾಯಿ ನಾರಾಯಣ್ ರಾವ್ ಸೇರಿದಂತೆ ಜೆಡಿಎಸ್ ನ 11 ಸದಸ್ಯರು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಎಲ್ಲರೂ ಕಾಂಗ್ರೆಸ್ ಸೇರಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಮತ್ತು ಕೆಪಿಸಿಸಿ ಸದಸ್ಯ ‌ಎನ್. ಶ್ರೀನಿವಾಸ್ ಉಪಸ್ಥಿತರಿದ್ದರು.

ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ 14 ಸದಸ್ಯರನ್ನು ಹೊಂದಿತ್ತು. 11 ಸದಸ್ಯರ ಪಕ್ಷಾಂತರದೊಂದಿಗೆ ಈಗ ಮೂವರಷ್ಟೇ ಜೆಡಿಎಸ್ ನಲ್ಲಿ ಉಳಿದುಕೊಂಡಿದ್ದಾರೆ. ಇದರೊಂದಿಗೆ ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ ಅಧಿಕಾರ ಕಳೆದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ