ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

Twitter
Facebook
LinkedIn
WhatsApp
Untitled 18

ಬೆಂಗಳೂರು (ಮೇ 24): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆಲ್ಲುವುದಕ್ಕೆ ಸಾಧ್ಯವಾಗಿದ್ದು, ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತುಕೊಂಡು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ಅವರು, ಹೊಸ ಸರ್ಕಾರ ಬಂದಿದೆ. ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಇತ್ತು.  ಇದನ್ನ ಕಾಂಗ್ರೆಸ್ ಅವರು ಹಣದಿಂದ ಮತ್ತೊಂದು ಮಗದೊಂದ ವಿಚಾರದಲ್ಲಿ ಕಾಂಗ್ರೆಸ್ ಗೆದ್ದಿದ್ದಾರೆ. ನಮ್ಮದು ‌ಪ್ರಾದೇಶಿಕ ಪಕ್ಷ. ನಮ್ಮಲ್ಲಿ ದೊಡ್ಡ ಮಟ್ಟದಲ್ಲಿ ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರು ನಾವು 60 ಲಕ್ಷ ಮತ ಪಡೆದಿದ್ದೇವೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯ್ತಿ ಹಾಗೂ ಲೋಕಸಭೆ ಚುನಾವಣೆಗೆ ನಾವು ಸಿದ್ದವಾಗಿ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ. ಈ ಮೊದಲು ಚುನಾವಣೆ ವೇಳೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿ. ಮೂರು ತಿಂಗಳು ಅವರಿಗೆ ಸಮಯ ಕೊಡ್ತೀವಿ. ಅವರಿಗೆ ಈ 3 ತಿಂಗಳು ಹನಿಮೂನ್ ಸಮಯವಾಗಿದೆ. ಜನರಿಗೆ ಕೊಟ್ಟ ಭರವಸೆ ಕಾಂಗ್ರೆಸ್ ಅವರು ಈಡೇರಿಸಲಿ. ಜೆಡಿಎಸ್ ನಲ್ಲಿ ಇಬ್ರಾಹಿಂ ಪಾತ್ರ ಏನು ಎಂಬ ಪ್ರಶ್ನೆ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸದಾ ಜನರ ಮಧ್ಯೆ ಇರೋನು. ಪಕ್ಷದ ಕಾರ್ಯಕರ್ತನಾಗಿ ಕೆಲ‌ಸ ಮಾಡ್ತೀನಿ ಎಂದು ತಿಳಿಸಿದರು.

ನೀವು ಕಾಂಗ್ರೆಸ್‌ನಲ್ಲಿ ಇದ್ದಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು ಎಂದು ಮಾಧ್ಯಮಗಳಿಂದ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗೌರವ ಇಲ್ಲದ ಕಡೆ ನಾನು ಇರೊಲ್ಲ. ಅಂತಹ ಸ್ಥಾನಕ್ಕೆ ನಾನು ಹೋಗಿಲ್ಲ. ಮಾನಕ್ಕಾಗಿ ಹಾಗೂ ಮರ್ಯಾದೆಗಾಗಿಯೇ ನಾನು ಪಕ್ಷವನ್ನು ಬಿಟ್ಟು ಬಂದೆ. ನನಗೆ ಯಾವುದೇ ಅಧಿಕಾರದ ಆಸೆ ಇಲ್ಲವೆಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ