ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್
ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಶತಾಯಗತಾಯ ಗೆಲುವು ಸಾಧಿಸಬೇಕು ಎಂದುಕೊಂಡಿರುವ ಬಿಜೆಪಿ (BJP), ಮಂಡ್ಯದಲ್ಲೂ ಹಿಂದುತ್ವದ ಮತ ಬೇಟೆಗೆ ಟಿಪ್ಪುವಿನ ಅಸ್ತ್ರ ಪ್ರಯೋಗಿಸಿದೆ. ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವಥ್ ನಾರಾಯಣ್ (Ashwath Narayan) ಹೇಳಿಕೆ ಮಂಡ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ.
ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಚುನಾವಣೆ ಚಾಣಕ್ಯ ಎಂದು ಕರೆಯಲ್ಪಡುವ ಅಮಿತ್ ಶಾ (Amit Shah) ಮಂಡ್ಯ ಜಿಲ್ಲೆ ಬಿಜೆಪಿಗೆ ಪೂರಕವಾಗಿದೆ ಎಂದು ಹೇಳುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಇದರ ಬೆನ್ನಲ್ಲಿ ಮಂಡ್ಯ ಜಿಲ್ಲೆಯನ್ನು ಗೆಲ್ಲಲು ಮತದಾರರನ್ನು ಹಿಂದುತ್ವದ ಮೂಲಕ ಗೆಲ್ಲಲು ಹೊಸ ಅಸ್ತ್ರವನ್ನು ಹೂಡುತ್ತಿದೆ.

ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದಾರೆ.
ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹೊಡೆದು ಹಾಕಬೇಕು ಎನ್ನುವ ಅರ್ಥದಲ್ಲಿ ಅಶ್ವಥ್ ನಾರಾಯಣ್ ಹೇಳಿದ್ರು ಸಹ, ಇವರ ಮಾತಿನ ದಾಟಿ ಬೇರೊಂದು ಆಯಾಮ ಪಡೆದುಕೊಂಡು ವಿವಾದ ಬಾಗಿಲು ತಟ್ಟುತ್ತಿದೆ. ಒಟ್ಟಾರೆ ಹಿಂದುತ್ವ ಅಜೆಂಡಾ ಮೂಲಕ ಮಂಡ್ಯ ಮತದಾರರನ್ನು ಸೆಳೆಯಲು ಅಶ್ವಥ್ ನಾರಾಯಣ್ ಹಾಡಿರುವ ಮಾತು ಸಾಕಷ್ಟು ಆಯಾಮಗಳಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.