ಸೋಮವಾರ, ಜನವರಿ 20, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!

Twitter
Facebook
LinkedIn
WhatsApp
canada accident ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!

ಟೆಸ್ಲಾ ಕಾರು ಅಪಘಾತ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಟೆಸ್ಲಾ ಕಾರು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟೊರೊಂಟೊ ಡೌನ್‌ಟೌನ್‌ನ ಲೇಕ್ ಶೋರ್ ಬೌಲೆವರ್ಡ್ ಈಸ್ಟ್ ಮತ್ತು ಚೆರ್ರಿ ಸ್ಟ್ರೀಟ್ ಪ್ರದೇಶದಲ್ಲಿ ಕಳೆದ ವಾರ ಗುರುವಾರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NAYAN BAKERY

25-32 ವರ್ಷದೊಳಗಿನ ಐವರು ಟೆಸ್ಲಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕಾಂಕ್ರೀಟ್ ಪಿಲ್ಲರ್ ಗೆ ಡಿಕ್ಕಿ ಹೊಡೆದು ನಂತರ ಗಾರ್ಡ್ ರೈಲಿಗೆ ಗುದ್ದಿದೆ. ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ವೇಗದ ಚಾಲನೆ ಅಪಘಾತಕ್ಕೆ ಪ್ರಮುಖ ಕಾರಣ ಇರಬಹುದು ಎಂದು ಶಂಕಿಸಲಾಗಿದೆ ಎಂದು ಟೊರೊಂಟೊ ಪೊಲೀಸ್ ಡ್ಯೂಟಿ ಇನ್ಸ್‌ಪೆಕ್ಟರ್ ಫಿಲಿಪ್ ಸಿಂಕ್ಲೇರ್ ಹೇಳಿದ್ದಾರೆ.

ಮೃತರೆಲ್ಲರೂ ಗುಜರಾತ್ ಮೂಲದವರು. ಮೃತರಲ್ಲಿ ಗೋಧ್ರಾ ನಿವಾಸಿಗಳಾದ ಕೇತಾಬಾ ಗೋಹಿಲ್ (29) ಮತ್ತು ಅವರ ಸಹೋದರ ನೀಲ್ರಾಜ್ ಗೋಹಿಲ್ (25) ಮತ್ತು ಆನಂದ್ ಜಿಲ್ಲೆಯ ಬೋರ್ಸಾದ್ ನಿವಾಸಿ ಜೈರಾಜ್ಸಿಂಗ್ ಸಿಸೋಡಿಯಾ ಎಂದು ಗುರುತಿಸಲಾಗಿದೆ. ಇನ್ನು 25 ವರ್ಷದ ಯುವತಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವೇಳೆ ಕೆಲ ಚಾಲಕರು ನೆರವಾಗಿದ್ದು ಯುವತಿಯನ್ನು ರಕ್ಷಿಸಿದ್ದಾರೆ. ಟೊರೊಂಟೊದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಪ್ರಜೆಗಳ ದುರಂತ ನಷ್ಟಕ್ಕೆ ಹೃತ್ಪೂರ್ವಕ ಸಂತಾಪ ಎಂದು ಟೊರೊಂಟೊದಲ್ಲಿನ ಭಾರತೀಯ ದೂತಾವಾಸದ ಅಧಿಕೃತ ಹ್ಯಾಂಡಲ್ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 8 ಜನ ಸಾವು

ಪೇಶಾವರ: ಪಾಕಿಸ್ತಾನ ದೇಶದ ವಾಯುವ್ಯ ಭಾಗದಲ್ಲಿ ಚೆಕ್‌ಪಾಯಿಂಟ್‌ನಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 8 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ, ಐವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಪೊಲೀಸರು ಹೇಳಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಾರ್ಯ ನಿರ್ವಹಿಸುವ ಮತ್ತು ಹೆಚ್ಚಾಗಿ ಮಿಲಿಟರಿ ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ತಾಲಿಬಾನ್ ಮೇಲೆ ಅನುಮಾನ ಬೀಳುವ ಸಾಧ್ಯತೆಯಿದೆ.

ಉತ್ತರ ವಜಿರಿಸ್ತಾನದಲ್ಲಿ ಈ ದಾಳಿ ನಡೆದಿದ್ದು, ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿಯೂ ಸಹ ಟ್ಯಾಂಕ್ ಜಿಲ್ಲೆಯಲ್ಲಿ ಮಿಲಿಟರಿ ಬೆಂಗಾವಲು ಪಡೆಗೆ ರಿಮೋಟ್ ನಿಯಂತ್ರಿತ ಬಾಂಬ್ ಸಿಡಿದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್‌ನ ಮೀರ್ ಅಲಿ ಪ್ರದೇಶದಲ್ಲಿ ಕಾರ್ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಅಮ್ಜದ್ ಖಾನಂದ್ ಹೇಳಿದ್ದಾರೆ. ಈ ದಾಳಿಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಬುಡಕಟ್ಟು ಜಿಲ್ಲೆಯ ಮೀರ್ ಅಲಿ ತಹಸಿಲ್‌ನಲ್ಲಿರುವ ಅಸ್ಲಾಮ್ ಚೆಕ್ ಪೋಸ್ಟ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಮಿರಾನ್ ಶಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇರಾನ್ ಸರ್ವೋಚ್ಚ ನಾಯಕನ ಎಕ್ಸ್‌ ಖಾತೆ ಅಮಾನತು

ಟೆಹ್ರಾನ್: ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇರಾನ್‌ನ (Iran) ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಇತ್ತೀಚೆಗೆ ಇರಾನ್ ಮೇಲೆ ಇಸ್ರೇಲ್ (Israel) ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಪೋಸ್ಟ್‌ನಲ್ಲಿ ಇಸ್ರೇಲ್‌ ತಪ್ಪು ಮಾಡಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ರಾಷ್ಟ್ರವು ಯಾವ ರೀತಿಯ ಶಕ್ತಿ, ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್‌ಗೆ ಅರ್ಥ ಮಾಡಿಸುತ್ತೇವೆ ಎಂದು ಅವರು ಬರೆದುಕೊಂಡಿದ್ದರು.

ಶನಿವಾರ ಇರಾನ್‌ನಲ್ಲಿ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್‌ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿರುವುದಾಗಿ ವರದಿಯಾಗಿದೆ.

ಇಸ್ರೇಲ್ ಶನಿವಾರ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟುಕೊಂಡು ವೈಮಾನಿಕ ದಾಳಿ ನಡೆಸಿತ್ತು. ಇದರ ಪರಿಣಾಮವಾಗಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್‌ನ ಮೇಲೆ ಇರಾನ್‌ ಇತ್ತೀಚಿಗೆ ನಡೆಸಿದ್ದ ರಾಕೆಟ್‌ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist