ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೊಯೋಟ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
ಟೊಯೋಟ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ಹೃದಯಾಘಾತದಿಂದ ನಿಧನ

ಬೆಂಗಳೂರು: ಆಟೋ ಮೊಬೈಲ್ ಕ್ಷೇತ್ರದ ದಿಗ್ಗಜ, ಟೊಯೋಟ ಕಿರ್ಲೋಸ್ಕರ್ ಮೋಟಾರ್‌ನ (Toyota Kirloskar) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) (64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಿರ್ಲೋಸ್ಕರ್‌ ಅವರಿಗೆ ಮಂಗಳವಾರ ತಡರಾತ್ರಿ ಹೃದಯಾಘಾತ ಸಂಭವಿಸಿದೆ. ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. 

ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿಸಲು ದುಃಖವಾಗಿದೆ ಎಂದು ವಾಹನ ತಯಾರಕರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ಟೊಯೊಟಾ ಇನ್ನೋವಾ ಹೈಕ್ರಾಸ್ ಅನಾವರಣದಲ್ಲಿ ಕಿರ್ಲೋಸ್ಕರ್ ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ