ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿಸಿಪಿ ಗಾಡಿಗೆ ಡಿಕ್ಕಿ ಹೊಡೆದ ಪ್ರಕರಣ- ಪೆಟಿಎಂ ಸಂಸ್ಥಾಪಕ ನಿಗೆ ಜಾಮೀನು ಮಂಜೂರು

Twitter
Facebook
LinkedIn
WhatsApp
ಡಿಸಿಪಿ ಗಾಡಿಗೆ ಡಿಕ್ಕಿ ಹೊಡೆದ ಪ್ರಕರಣ-ಪೆಟಿಎಂ ಸಂಸ್ಥಾಪಕ ನಿಗೆ ಜಾಮೀನು ಮಂಜೂರು

ದೆಹಲಿ: ಕಳೆದ ತಿಂಗಳು ಡಿಸಿಪಿ ಕಾರಿಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಪೇಟಿಎಂ (Paytm) ಸಂಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ (Vijay Shekhar Sharma) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಶರ್ಮಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಶರ್ಮಾ ವಿರುದ್ಧ ಐಪಿಸಿ ಸೆಕ್ಷನ್ 279 ( ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್‌ಐಆರ್‌ನ ಪ್ರಕಾರ, ಶರ್ಮಾ ಜಾಗ್ವಾರ್ ಲ್ಯಾಂಡ್ ರೋವರ್ (Jaguar Land Rover)ಅವರು ಓಡಿಸುತ್ತಿದ್ದರು ಎಂದು ಹೇಳಲಾಗಿದ್ದು, ಅರಬಿಂದೋ ಮಾರ್ಗದಲ್ಲಿರುವ ಮದರ್ ಇಂಟರ್‌ನ್ಯಾಶನಲ್ ಸ್ಕೂಲ್ ಹೊರಗೆ ಡಿಸಿಪಿ (ದಕ್ಷಿಣ ಜಿಲ್ಲೆ) ಅವರ ವಾಹನಕ್ಕೆ ಶರ್ಮಾ ಅವರ ವಾಹನ ಢಿಕ್ಕಿ ಹೊಡೆದಿದೆ.  ಫೆಬ್ರವರಿ 22 ರಂದು ಈ ಘಟನೆ ನಡೆದಿದ್ದು, ಡಿಸಿಪಿ (ದಕ್ಷಿಣ) ಬೆನಿಟಾ ಮೇರಿ ಜೈಕರ್ ಅವರ ಬಳಿ ಚಾಲಕನಾಗಿ ನಿಯೋಜಿಸಲಾದ ಕಾನ್‌ಸ್ಟೆಬಲ್ ದೀಪಕ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.  ಪೊಲೀಸರು ಶರ್ಮಾರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರ ಸುಮನ್ ನಲ್ವಾ ಖಚಿತಪಡಿಸಿದ್ದಾರೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಲು ಡಿಸಿಪಿ ಜೈಕರ್ ನಿರಾಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.  ಕಾನ್‌ಸ್ಟೆಬಲ್ ಕುಮಾರ್ ಅವರನ್ನು ಸಂಪರ್ಕಿಸಿದಾಗ, ಅವರನ್ನು ಡಿಸಿಪಿ (ಜೈಕರ್) ಅವರ ಚಾಲಕನಾಗಿ ತನ್ನನು ನಿಯೋಜಿಸಲಾಗಿದ್ದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ತಮ್ಮ ವಾಹನವನ್ನು ಪೆಟ್ರೋಲ್ ಪಂಪ್‌ಗೆ ಕೊಂಡೊಯ್ದಿದ್ದೆ ಎಂದಿದ್ದಾರೆ. ಕಾನ್ಸ್‌ಟೇಬಲ್ ಪ್ರದೀಪ್ ಎಂಬ ಆಪರೇಟರ್ ನನ್ನೊಂದಿಗಿದ್ದರು. ನಾವು ಮದರ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ತಲುಪಿದಾಗ ಅಲ್ಲಿ ಟ್ರಾಫಿಕ್ ಜಾಮ್ ಕಂಡುಬಂತು. ಜನರು ತಮ್ಮ ಮಕ್ಕಳನ್ನು (ಶಾಲೆಗೆ) ಬಿಡುತ್ತಿರುವುದನ್ನು ನಾನು ನೋಡಿದೆ. ಟ್ರಾಫಿಕ್ ಕ್ಲಿಯರ್ ಮಾಡಲು ಪ್ರದೀಪ್ ಅವರಲ್ಲಿ ಕೆಳಗಿಳಿಯಲು ಹೇಳಿ ನಾನು ವೇಗವನ್ನು ಕಡಿಮೆ ಮಾಡಿದೆ” ಎಂದು ಅವರು ಹೇಳಿದರು.

ನಾನು ಕಾಯುತ್ತಿದ್ದಾಗ ಆ ಕಡೆಯಿಂದ ಕಾರೊಂದು ವೇಗವಾಗಿ ಬಂದು ನನ್ನ ವಾಹನಕ್ಕೆ ಗುದ್ದಿತು. ಹರ್ಯಾಣ ನೋಂದಣಿ ನಂಬರ್ ಪ್ಲೇಟ್ ಇದ್ದು, ಆ ವ್ಯಕ್ತಿ ಅಲ್ಲಿಂದ ವಾಹನವನ್ನು ಮತ್ತಷ್ಟು ರಭಸದಲ್ಲಿ ಚಾಲನೆ ಮಾಡಿ ತಪ್ಪಿಸಿಕೊಂಡಿದ್ದಾರ. ನಮ್ಮ ವಾಹನಕ್ಕೆ ಹಾನಿಯಾಗಿದೆ. ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಲು ಪ್ರದೀಪ್ ನನ್ನಲ್ಲಿ ಹೇಳಿದರು. ನಾವು ನಮ್ಮ ಡಿಸಿಪಿಗೆ ತಿಳಿಸಿದ್ದು ಅವರು ಕಾರಿನ ಬಗ್ಗೆ ಕೇಳಿದರು. ನಾವು ನಂಬರ್ ನೋಟ್ ಮಾಡಿದ್ದೇವೆ ಎಂದು ಹೇಳಿದ್ದೇವೆ ಮತ್ತು ನಂತರ ನಾವು ಮಾಳವೀಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist