ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿಸೆಂಬರ್ 31 ರಿಂದ ಬೆಂಗಳೂರಿನಲ್ಲಿ ಕಸ ಸಂಗ್ರಹಕರರ ಪ್ರತಿಭಟನೆ.

Twitter
Facebook
LinkedIn
WhatsApp
ಡಿಸೆಂಬರ್ 31 ರಿಂದ ಬೆಂಗಳೂರಿನಲ್ಲಿ ಕಸ ಸಂಗ್ರಹಕರರ ಪ್ರತಿಭಟನೆ.

ಹೊಸವರ್ಷದ ಸಂಭ್ರಮಕ್ಕೆ ಓಮೈಕ್ರಾನ್ ಅಡ್ಡಿಯಾಗಿರೋ ಬೆನ್ನಲ್ಲೇ ಹೊಸ ವರ್ಷದ ಅಳಿದುಳಿದ ಖುಷಿಗೆ ಬೆಂಗಳೂರಿನ ಕಸದ ಸಮಸ್ಯೆ ಅಡ್ಡಿಯಾಗೋ ಸಾಧ್ಯತೆ ಇದೆ. ಹೌದು, ಹೊಸ ವರ್ಷದ ಆರಂಭಕ್ಕೆ ಕಸದ ಸ್ಟ್ರೈಕ್ ಸಮಸ್ಯೆ ಎದುರಾಗಿದ್ದು ಡಿಸೆಂಬರ್ 31 ರಿಂದ ನಗರದಾದ್ಯಂತ ಕಸ ಸಂಗ್ರಹಣೆ ನಿಲ್ಲಿಸಲು (Garbage Strike Bangalore) ನಿರ್ಧರಿಸಿದೆ. 2022 ರ ಮೊದಲ ದಿನದಿಂದಲೇ ಬೆಂಗಳೂರಿನ ಜನರಿಗೆ ಪ್ರತಿಭಟನೆಯ ಬಿಸಿ ಎದುರಾಗಲಿದೆ. ಬಾಕಿ ಇರುವ ಬಿಲ್ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯ ಕಸ ಸಂಗ್ರಹಕಾರರು ಮುಷ್ಕರಕ್ಕೆ ನಿರ್ಧರಿಸಿದ್ದಾರೆ.

ಹಲವು ತಿಂಗಳಿನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸುವ ಗುತ್ತಿಗೆದಾರರಿಗೆ ಬಿಬಿಎಂಪಿ ಬಿಲ್ ಪಾವತಿ ಮಾಡಿಲ್ಲ.‌ ಬಾಕಿ‌ ಉಳಿಸಿಕೊಂಡಿರುವ ಬಿಲ್ ಪಾವತಿ ಮಾಡುವಂತೆ ಕೇಳಿದರೇ ಅಧಿಕಾರಿಗಳು ಲಂಚ ಕೇಳುತ್ತಾರೆ ಎಂದು ಕಸ ಗುತ್ತಿಗೆದಾರರು ಆರೋಪಿಸಿದ್ದಾರೆ. ಕಸ ಗುತ್ತಿಗೆದಾರರ ಈ ಸ್ಟ್ರೈಕ್ ಗೆ ಕಸದ ಲಾರಿ ಚಾಲಕರು ಕೂಡ ಬೆಂಬಲ ಸೂಚಿಸಿದ್ದು ಕಸದ ಲಾರಿಗಳು ಕೂಡಾ ಸಂಚಾರ ನಿಲ್ಲಿಸಲಿವೆ.

ಈ ಬಗ್ಗೆ ಮಾಹಿತಿ‌ ನೀಡಿರುವ ಕಸ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಾಲ ಸುಬ್ರಹ್ಮಣ್ಯ, ಈ ಸಲ ನಾವು ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರುವ ವರೆಗೂ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ ಎಂದಿದ್ದಾರೆ. ಡಿಸೆಂಬರ್ 31 ರಂದು ನಮ್ಮ ಮುಷ್ಕರ ಆರಂಭವಾಗಲಿದೆ. ನಗರದ ಎಲ್ಲಾ ಏರಿಯಾದ ಕಸ ಗುತ್ತಿಗೆದಾರರು ಕಸ ಸಂಗ್ರಹಣೆ ನಿಲ್ಲಿಸಲಿದ್ದು ಲಾರಿಗಳು ಕೂಡ ಸಂಚರಿಸುವುದಿಲ್ಲ.
ಡಿಸೆಂಬರ್ 31 ರಂದು ಕನ್ನಡ ಪರ ಸಂಘಟನೆಗಳು ಎಂಇಎಸ್ ವಿರೋಧಿಸಿ ಬಂದ್ ಗೆ ಕರೆ ನೀಡಿದ್ದಾರೆ. ನಾವು ಆ ಬಂದ್ ಬೆಂಬಲಿಸುತ್ತೇವೆ. ಎರಡು ದಿನ ಕಸ ಸಂಗ್ರಹಿಸದಿದ್ದರೇ ನಗರದ ಸ್ಥಿತಿ ಏನಾಗುತ್ತದೆ ಎಂಬುದನ್ನು ಅಧಿಕಾರಿಗಳಿಗೆ ಮನದಟ್ಟು ಮಾಡಿಸಲು ಈ ಸ್ಟ್ರೈಕ್ ನಡೆಸುತ್ತಿದ್ದೇವೆ. ನಮಗೆ ಹಲವು ತಿಂಗಳಿನಿಂದ ಬಾಕಿ ಇರುವ ಬಿಲ್ ಬಿಡುಗಡೆ ಮಾಡಲೂ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ಅದರಲ್ಲೂ ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತೆ ತುಳಸಿ‌ಮದ್ದಿನೇನಿ ವಿರುದ್ಧ ಗುತ್ತಿಗೆದಾರರು ನೇರವಾಗಿ ಆರೋಪ‌ಮಾಡಿದ್ದಾರೆ.
ಅಲ್ಲದೇ ಬಿಲ್ ಪಾವತಿಗೆ ಸಿಇ ಮತ್ತು ಜೆಸಿ ಕೂಡಾ ಮಾಮೂಲಿ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂಘ ಆರೋಪಿಸಿದೆ. ಹೀಗಾಗಿ ಬೆಂಗಳೂರಿಗೆ ಹೊಸ ವರ್ಷದ ಮೊದಲ ದಿನವೇ ಕಸದ ಸಮಸ್ಯೆ ಎದುರಾಗಲಿದ್ದು ಎರಡು ದಿನ ಕಸ ಎತ್ತದಿದ್ದರೇ ಉದ್ಯಾನನಗರಿ ಕಸದ ಕೊಂಪೆಯಾಗೋದರಲ್ಲಿ ಯಾವುದೇ ಅನುಮಾನವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು