ಚಿಕ್ಕಮಗಳೂರು: ಶಕ್ತಿ ಯೋಜನೆ (Shakti Scheme) ಜಾರಿ ಹಿನ್ನೆಲೆ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ಗಳಲ್ಲಿ (KSRTC Bus) ಮಹಿಳೆಯರದ್ದೇ ದರ್ಬಾರ್. ವೀಕೆಂಡ್ ಶುರುವಾಗುತ್ತಲೇ ಬಸ್ಗಳಲ್ಲಿ ಕಾಲು ಇಡಲು ಸಾಧ್ಯವಾಗದಷ್ಟು ರಶ್. ಬಸ್ಗಳಲ್ಲಿ ಫ್ರೀ ಪ್ರಯಾಣ ಅಂತ ಮಹಿಳೆಯರು ಪ್ರವಾಸ, ಧಾರ್ಮಿಕ ಕ್ಷೇತ್ರಗಳಿಗೆ ಸಾಗರೋಪಾದಿಯಲ್ಲಿ ತೆರಳುತ್ತಿದ್ದಾರೆ. ಇಲ್ಲೊಬ್ಬ ಮಹಿಳೆ ಬಸ್ ಫುಲ್ ರಶ್ ಆಯ್ತು ಅಂತ ಡ್ರೈವರ್ ಸೀಟ್ ಮೂಲಕ ಹತ್ತಿರುವ ಘಟನೆ ಶೃಂಗೇರಿಯಲ್ಲಿ (Chikkamagaluru) ನಡೆದಿದೆ.
ಡ್ರೈವರ್ ಸೀಟ್ನ ಡೋರ್ ಮೂಲಕ ಬಸ್ ಹತ್ತಿದ ನಾರಿಯರು!
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ (Sringeri) ಬಸ್ ಹತ್ತಲು ಮಹಿಳೆಯರು ಪರದಾಡಿದ್ದಾರೆ. ಬಸ್ಗಾಗಿ ನಿಲ್ದಾಣದಲ್ಲಿ ಕಾದು ಕೂತು ಕೊನೆಗೆ ಬಸ್ ಬಂದಾಗ ಹತ್ತಲು ಮುಗಿಬಿದ್ದಿದ್ದಾರೆ. ಈ ವೇಳೆ ಮಹಿಳೆ ಬಸ್ನಲ್ಲಿ ಸೀಟ್ ಇಲ್ಲ, ಕಾಲು ಹಾಕಲು ಕೂಡಾ ಜಾಗ ಇಲ್ಲ ಅಂತ ಕೊನೆಗೆ ಡ್ರೈವರ್ ಸೀಟ್ನಿಂದಲೇ ಹತ್ತಿದ್ದಾರೆ.
5 ವರ್ಷವೂ ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಮಹದೇವಪ್ಪ
ಮೈಸೂರು: ಮುಂದಿನ 5 ವರ್ಷದವರೆಗೂ ಸಿದ್ದರಾಮಯ್ಯ ಅವರೇ ರಾಜ್ಯ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ಅವರು ಹೇಳಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘ ಶನಿವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಸಚಿವ ಎಂ.ಬಿ.ಪಾಟೀಲ್ ಮತ್ತು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಎನ್ನುವುದಷ್ಟೆ ಚರ್ಚೆಯಾಗಿದೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರೇ ಮುಂದುವರಿಯುತ್ತಾರೆ. ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿರುವುದರಲ್ಲಿ ತಪ್ಪಿಲ್ಲ. ಮತ ಹಾಕುವವರು ನಾವು, ಅಧಿಕಾರ ಅನುಭವಿಸುವವರು ಬೇರೆಯವರು ಎಂಬ ನೋವು ದಲಿತರಲ್ಲಿದೆ.
ಏಕೆಂದರೆ ಈ ಬಾರಿ ಹೆಚ್ಚು ದಲಿತರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ತುಳಿತಕ್ಕೊಳಗಾದವರಿಗೆ ಅವಕಾಶ ಸಿಗಬೇಕು. ನನಗೂ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಏಕೆಂದರೆ ನಾನು ಬುದ್ಧನಲ್ಲ, ಆತನ ಅನುಯಾಯಿ ಅಷ್ಟೇ ಎಂದು ಹೇಳಿದರು.
ಜನರ ಮೂಲ ಹಕ್ಕುಗಳಿಗೆ ಧಕ್ಕೆ ಆಗದಂತೆ ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರೆಸಬೇಕೋ, ಬೇಡವೋ ಎಂಬುದನ್ನು ನಿರ್ಧರಿಸಲಾಗುವುದು. ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಮುಂತಾದವು ಸಂವಿಧಾನದಲ್ಲೇ ಅಡಕವಾಗಿದೆ. ಯಾವ ವ್ಯಕ್ತಿ, ಯಾವುದೇ ಧರ್ಮವನ್ನಾದರೂ ಆಯ್ಕೆ ಮಾಡಿಕೊಳ್ಳಬಹುದು. ತನ್ನ ಧರ್ಮದ ಪ್ರಚಾರ ಮಾಡುವುದಕ್ಕೂ ಅಡ್ಡಿ ಇಲ್ಲ. ಆದರೆ ಬಲವಂತವಾಗಿ ಮತಾಂತರ ಮಾಡಲು ಅವಕಾಶ ಇಲ್ಲ. ಇದಕ್ಕೆ ಪ್ರತ್ಯೇಕ ಕಾಯ್ದೆ ಬೇಕಿಲ್ಲ ಎಂದು ತಿಳಿಸಿದರು.