ತಲವಾರಿನಲ್ಲಿ ಕೇಕ್ ಕಟ್ ಮಾಡಿದ ರಾಮ್ ರಹೀಮ್: ವಿಡಿಯೋ ವೈರಲ್
ಹೊಸದಿಲ್ಲಿ: ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರು ತಲಾವಾರಿನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಘಟನೆ ನಡೆದಿದೆ.
ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ ಪಡೆದು ಹೊರಬಂದರು. ಅಲ್ಲಿಮದ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದರು. ರಾಮ್ ರಹೀಮ್ ಅವರು ಬೃಹತ್ ಕೇಕ್ ನೊಂದಿಗೆ ಸಂಭ್ರಮಾಚರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್ ಅವರು ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಲು ಬಯಸುವುದಾಗಿ ಹೇಳಿದ್ದಾರೆ. “ಐದು ವರ್ಷಗಳ ಬಳಿಕ ನನಗೆ ಇಂತಹ ಅವಕಾಶ ಸಿಕ್ಕಿದೆ. ಹೀಗಾಗಿ ಕನಿಷ್ಠ ಐದು ಕೇಕ್ ಆದರೂ ಕಟ್ ಮಾಡಬೇಕು” ಎಂದು ರಾಮ್ ರಹೀಮ್ ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.