ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುರ್ತು ವೈದ್ಯಕೀಯ ಚಿಕಿತ್ಸೆ- ಕರಾಚಿಯಲ್ಲಿ ಭೂಸ್ಪರ್ಶ ಮಾಡುವ ಮೊದಲೇ ಪ್ರಯಾಣಿಕ ಸಾವು

Twitter
Facebook
LinkedIn
WhatsApp
Facebook
Twitter
LinkedIn
WhatsApp
index 8

ನವದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ (IndiGo Flight) ದಲ್ಲಿ ಪ್ರಯಾಣಿಕರೊಬ್ಬರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಕರಾಚಿಗೆ ತನ್ನ ಪಥ ಬದಲಿಸಿದ್ದು, ತುರ್ತು ಭೂಸ್ಪರ್ಶ ಮಾಡುವ ಮೊದಲೇ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಇಂದು ಬೆಳಗ್ಗೆ ದೆಹಲಿಯಿಂದ ಇಂಡಿಗೋ ಏರ್ ಲೈನ್ ಸಂಸ್ಥೆಯ 6ಇ-1736 ವಿಮಾನವು ಪ್ರಯಾಣ ಬೆಳೆಸಿದೆ. ವಿಮಾನ ಜರ್ನಿ ಆರಂಭವಾದ ಕೆಲ ಕ್ಷಣಗಳಲ್ಲಿ, ಪ್ರಯಾಣಿಕ ನೈಜೀರಿಯಾ ಮೂಲದ ಅಬ್ದುಲ್ಲಾ (60)ಗೆ ತೀವ್ರ ಅಸ್ವಸ್ಥತೆ ಕಾಡಿದೆ. ಈ ವೇಳೆ ವಿಮಾನವು ಪಾಕಿಸ್ತಾನದ ಕಡೆಯಿಂದ ಹಾದು ಹೋಗುತ್ತಿತ್ತು.

ವಿಚಾರದ ತಿಳಿದ ಕೂಡಲೇ ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸಿದ ಪೈಲಟ್, ಅಬ್ದುಲ್ಲಾ ಅವರ ಪರಿಸ್ಥಿತಿಯನ್ನು ವಿವರಿಸಿ ತುರ್ತು ಭೂಸ್ಪರ್ಶನಕ್ಕಾಗಿ ಅನುಮತಿ ಕೋರಿದ್ದಾರೆ. ಇದನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ ಅನುಮೋದಿಸಿ, ತುರ್ತು ಭೂಸ್ಪರ್ಶ ಮಾಡಲು ಅನುಮತಿ ನೀಡಿದ್ದಾರೆ. ಇತ್ತ ಅದಾಗಲೇ ಅಬ್ದುಲ್ಲಾ ಅವರ ಪರಿಸ್ಥಿತಿ ತೀರಾ ಹದಗೆಟ್ಟಿದೆ. ವಿಮಾನವನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Karachi International Airport) ದಲ್ಲಿ ಇಳಿಸುವ ಮುನ್ನವೇ ಅಬ್ದುಲ್ಲಾ ಅಸುನೀಗಿದ್ದಾರೆ.

ಇಂಡಿಗೋ ಸಂಸ್ಥೆಯಿಂದ ಪ್ರಕಟಣೆ: ದೆಹಲಿಯಿಂದ ದೋಹಾಕ್ಕೆ ಪ್ರಯಾಣಿಸುತ್ತಿದ್ದ ನಮ್ಮ ಸಂಸ್ಥೆಯ ವಿಮಾನವು ಮಾರ್ಗ ಮಧ್ಯೆ ಪಾಕಿಸ್ತಾನದ ಕರಾಚಿ ಕಡೆಗೆ ಪ್ರಯಾಣ ಬೆಳೆಸಿತು. ಇದಕ್ಕೆ ವಿಮಾನದಲ್ಲಿದ್ದ ವ್ಯಕ್ತಿಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ಬೇಕಾಗಿದ್ದೇ ಕಾರಣ ಎಂದು ಹೇಳಿದ್ದಾರೆ. ಆದರೆ ದುರದೃಷ್ಟವಶಾತ್ ಆ ವ್ಯಕ್ತಿಯು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವುದಕ್ಕೂ ಮುನ್ನವೇ ಮೃತಪಟ್ಟಿದ್ದಾರೆ.

ತೀವ್ರ ಅಸ್ವಸ್ಥರಾಗಿದ್ದ ವ್ಯಕ್ತಿಯನ್ನು ನಮ್ಮ ಸತತ ಪ್ರಯತ್ನದ ನಡುವೆಯೂ ಉಳಿಸಿಕೊಳ್ಳಲಾಗದೇ ಹೋಗಿದ್ದು ನಮ್ಮ ದುರಾದೃಷ್ಟ. ಅವರ ಕುಟುಂಬದವರಿಗೆ ಹಾಗೂ ಅವರ ಸ್ನೇಹಿತರಿಗೆ ದುಃಖದಿಂದ ಬೇಗನೇ ಚೇತರಿಸಿಕೊಳ್ಳುವಂಥ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಹಾರೈಸುತ್ತೇವೆ ಎಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ