ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆ೦ತಿಲ್ 5 ಲಕ್ಷ ಮತಗಳ ಬಾರಿ ಅಂತರದಿಂದ ಗೆಲುವು!
ಮಂಗಳೂರು: ತಮಿಳುನಾಡಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂತಿಲ್ 5 ಲಕ್ಷ ಮತಗಳ ಅಂತರದಿಂದ ಗೆದ್ದು ಬಂದಿದ್ದಾರೆ ಎಂದು ವರದಿಯಾಗಿದೆ.
2009ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್. ಮೂಲತಃ ತಮಿಳುನಾಡಿನವರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗಲೇ ನಾಗರೀಕ ಸೇವೆಗೆ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು.
ಕಾಂಗ್ರೆಸ್ ಸೇರಿದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ 2017ರಿಂದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ಕೆಲಸಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದರು. ಅವರು ರಾಜೀನಾಮೆ ನೀಡುವಾಗಲೇ ರಾಜಕೀಯಕ್ಕೆ ಬರುವುದಾಗಿ ಘೋಷಣೆ ಮಾಡಿದ್ದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಮುಂದಿನ ರಾಜಕೀಯ ನಡೆಯ ಬಗ್ಗೆಯೂ ಚರ್ಚಿಸಿದ್ದರು
ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ:
2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗೆಸ್ ಪಕ್ಷ ಪೂರ್ಣ ಬಹುಮತ ಪಡೆದು ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ಸಸಿಕಾಂತ್ ಸೆಂಥಿಲ್ ಶ್ರಮವೂ ಅಡಗಿದೆ ಎಂದರೆ ಎಲ್ಲರೂ ನಂಬಲೇಬೇಕು.
ಹೌದು ಕಾಂಗ್ರೆಸ್ ಸೇರಿದ್ದ ಸಸಿಕಾಂತ್ ಸೆಂಥಿಲ್ ವಿಧಾನಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ಕಾಂಗ್ರೆಸ್ ವಾರ್ ರೂಂನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿಯೂ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ಅವರು ನೋಡಿಕೊಂಡಿದ್ದರು.
ಕಾಂಗ್ರೆಸ್ ಸೇರಿದ್ದ ಸಸಿಕಾಂತ್ ಸೆಂಥಿಲ್ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಅವರು ತಿರುವಳ್ಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಿ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ