ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದತ್ತಪೀಠ ಮಾರ್ಗದಲ್ಲಿ ಬೃಹತ್ ಆಂಜನೇಯನ ಏಕಶಿಲಾ ಮೂರ್ತಿ ಸ್ಥಾಪನೆ!

Twitter
Facebook
LinkedIn
WhatsApp
ದತ್ತಪೀಠ ಮಾರ್ಗದಲ್ಲಿ ಬೃಹತ್ ಆಂಜನೇಯನ ಏಕಶಿಲಾ ಮೂರ್ತಿ ಸ್ಥಾಪನೆ!

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ.

ಪಶ್ಚಿಮಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್‍ಗಂಡಿ ಎಂಬ ಸ್ಥಳದಲ್ಲಿರುವ ಆಂಜನೇಯನ ಗುಡಿ ಬಳಿಯೇ ಈ 21 ಅಡಿ ಎತ್ತರದ ಆಂಜನೇಯ ನೆಲೆ ನಿಲ್ಲಲಿದ್ದಾನೆ. ಈಗಾಗಲೇ ಮೂರ್ತಿ ಕೆತ್ತನೆಗೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು, ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಕೃಷ್ಣಶಿಲೆ ಕಲ್ಲುಗಳು ಕೂಡ ನಗರಕ್ಕೆ ಆಗಮಿಸಿವೆ.

ನಗರದ ದ್ವಾರಬಾಗಿಲು ದಾಸರಹಳ್ಳಿ ಬಳಿ ಕಲ್ಲುಗಳಿಗೆ ಪೂಜೆ ಮಾಡಿ ಪುರ ಪ್ರವೇಶ ಮಾಡಿಕೊಳ್ಳಲಿದ್ದಾರೆ. ಕಲ್ಲಿನ ಜೊತೆ ಶಿಲ್ಪಿಗಳೂ ಕೂಡ ಆಗಮಿಸಿದ್ದಾರೆ. ಮೂರ್ತಿಯನ್ನ ಪ್ರತಿಷ್ಠಾಪಿಸುವ ಜಾಗದಲ್ಲೇ ಕೆತ್ತನೇ ಮಾಡಬೇಕೋ ಅಥವಾ ಬೇರೇಡೆ ಕೆತ್ತನೆ ಮಾಡಿ ಅಲ್ಲಿಗೆ ಕೊಂಡೊಯ್ದು ಪ್ರತಿಷ್ಠಾಪಿಸಬೇಕೋ ಎಂಬ ಚರ್ಚೆಗಳು ನಡೆಯುತ್ತಿವೆ.

ಮುಳ್ಳಯ್ಯನಗಿರಿ ತಪ್ಪಲಿನ ರಸ್ತೆಗಳು ಅತ್ಯಂತ ಚಿಕ್ಕದಾಗಿರುವುದರಿಂದ ಅಷ್ಟು ದೊಡ್ಡ ಕಲ್ಲನ್ನು ಹೊತ್ತ ಲಾರಿ ಈ ಮಾರ್ಗದಲ್ಲಿ ಸಂಚರಿಸುತ್ತಾ ಎಂಬ ಅನುಮಾನದೊಂದಿಗೆ ಲಾರಿ ಚಾಲಕ ಹೋಗಿ ಮಾರ್ಗವನ್ನೂ ಕೂಡ ನೋಡಿ ಬಂದಿದ್ದಾರೆ. ಈ ಮೂರ್ತಿ ಕವಿಕಲ್‍ಗಂಡಿ ಬಳಿ ನೆಲೆ ನಿಂತರೆ ಸುತ್ತಮುತ್ತಲಿನ ಸುಮಾರು 25-30 ಕಿ.ಮೀ. ದೂರಕ್ಕೂ ಈ ಮೂರ್ತಿ ಕಾಣುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ದತ್ತಪೀಠ ಮಾರ್ಗದಲ್ಲಿ ಬೃಹತ್ ಆಂಜನೇಯನ ಏಕಶಿಲಾ ಮೂರ್ತಿ ಸ್ಥಾಪನೆ!

ಈಗಾಗಲೇ ಸಾವಿರಾರು ಭಕ್ತರು ದತ್ತಪೀಠಕ್ಕೆ ಬಂದು ಪ್ರಕೃತಿ ಮಧ್ಯೆ ನೆಲೆಸಿರುವ ದತ್ತಾತ್ತೇಯರ ದರ್ಶನ ಮಾಡುತ್ತಿದ್ದಾರೆ. ಈ ಮೂರ್ತಿ ನೆಲೆ ನಿಂತರೇ ಕಾಫಿನಾಡು ದೇಶದ ಅತ್ಯಂತ ಹೆಸರಾಂತ ಪ್ರವಾಸಿ ತಾಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ದೇಶಾದ್ಯಂತ ಇರೋ ಲಕ್ಷಾಂತರ ಆಂಜನೇಯ ಭಕ್ತರು ಕಾಫಿನಾಡ ಪ್ರಕೃತಿ ಸೌಂದರ್ಯದ ಆಂಜನೇಯ ದರ್ಶನವನ್ನೂ ಪಡೆಯಲಿದ್ದಾರೆ. ಆಂಜನೇಯ ಸಂಜೀವಿನಿಗಾಗಿ ಪರ್ವತವನ್ನ ಹೊತ್ತೊಯ್ಯುವಾಗ ತುಂಡಾಗಿ ಬಿದ್ದ ಭಾಗವೇ ಚಂದ್ರದ್ರೋಣ ಪರ್ವತಗಳ ಸಾಲು ಎಂಬ ನಂಬಿಕೆ ಭಕ್ತರಲ್ಲಿದೆ.

ಇದೇ ಡಿಸೆಂಬರ್ ಎರಡನೇ ವಾರದಲ್ಲಿ ತಾಲೂಕಿನ ದತ್ತಪೀಠದಲ್ಲಿ ಮೂರು ದಿನಗಳ ಕಾಲ ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆಗೆ 21 ಅಡಿಯ ಬೃಹತ್ ಪರ್ವತಾಂಜನೇಯನ ಮೂರ್ತಿ ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ, ಮುಗಿಲೆತ್ತರದ ಬೆಟ್ಟಗುಡ್ಡಗಳ ನಡುವಿನ ಸುಂದರ ಪ್ರಕೃತಿಯ ಮಡಿಲಲ್ಲಿ ನೆಲೆ ನಿಲ್ಲುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ