ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುಬೈನಲ್ಲಿ ಭೀಕರ ರಸ್ತೆ ಅಪಘಾತ – ರಾಯಚೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
12 3 2010 025 2

ರಾಯಚೂರು: ದುಬೈನಲ್ಲಿ (Dubai) ಸಂಭವಿಸಿರುವ ಬಸ್ ಹಾಗೂ ಕಂಟೇನರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ (Accident) ರಾಯಚೂರು (Raichur) ಮೂಲದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ರಾಯಚೂರಿನಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಇಡೀ ಕುಟುಂಬ ಅಪಘಾತಕ್ಕೀಡಾಗಿದೆ. ಮೃತರು ನಗರದ ಆಶಾಪುರ ರಸ್ತೆಯ ದ್ವಾರಕಾನಗರದ ನಿವಾಸಿಗಳು. ರಾಯಚೂರು ಕೃಷಿ ವಿವಿಯಲ್ಲಿ ಕುಲಪತಿಗಳ ಆಪ್ತ ಸಹಾಯಕರಾಗಿದ್ದ ಶಫಿ ಸುಳ್ಳೇದ್ (53), ಅವರ ಪತ್ನಿ ಸಿರಾಜ್ ಬೇಗಂ (45), ಪುತ್ರಿ ಶಿಫಾ (20), ತಾಯಿ ಬೇಬಿ ಜಾನ್ (64) ಮೃತ ದುರ್ದೈವಿಗಳು. ಅಪಘಾತದಲ್ಲಿ ಪುತ್ರ ಸಮೀರ್‌ಗೆ ಗಂಭೀರವಾಗಿ ಗಾಯಗಳಾಗಿದ್ದು, ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

12 3 2010 025 3

ಶಫಿ ಸುಳ್ಳೇದ್ ಕುಟುಂಬ ಫೆಬ್ರವರಿ 14 ರಂದು ನಗರದಿಂದ ಮೆಕ್ಕಾ, ಮದೀನಾಕ್ಕೆ ತೆರಳಿದ್ದರು. ಫೆಬ್ರವರಿ 22 ರಂದು ಬೆಳಗಿನ ಜಾವ ಶಫಿ ಕುಟುಂಬ ಪ್ರಯಾಣಿಸುತ್ತಿದ್ದ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಚಾಲಕ ಸೇರಿ ಬಸ್‌ನಲ್ಲಿದ್ದ ಹಲವರು ಸಾವನ್ನಪ್ಪಿದ್ದಾರೆ. ಮೃತರ ಒಟ್ಟು ಸಂಖ್ಯೆ ತಿಳಿದುಬಂದಿಲ್ಲ.

 

ಪವಿತ್ರ ಯಾತ್ರೆಗೆ ತೆರಳಿದ್ದ ವೇಳೆ ಅಪಘಾತ ಸಂಭವಿಸಿರುವುದರಿಂದ ಮೃತರ ಅಂತ್ಯಕ್ರಿಯೆ ದುಬೈನಲ್ಲೇ ಮಾಡಲಾಗುತ್ತದೆ ಎಂದು ಮೃತರ ಕುಟುಂಬದವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ