ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇಡಿ ದಾಳಿ: 2 ಕೋಟಿ ರೂ. ನಗದು, 1.8 ಕೆಜಿ ಚಿನ್ನ ಪತ್ತೆ

Twitter
Facebook
LinkedIn
WhatsApp
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇಡಿ ದಾಳಿ: 2 ಕೋಟಿ ರೂ. ನಗದು, 1.8 ಕೆಜಿ ಚಿನ್ನ ಪತ್ತೆ
 

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರ ನಿವಾಸ ಮತ್ತು ಅವರ ಸಹವರ್ತಿಗಳ ನಿವಾಸ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದು, ಈ ವೇಳೆ ಎರಡು ಕೋಟಿಗೂ ಹೆಚ್ಚು ನಗದು ಮತ್ತು 1.8 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಫಾಲೋ ಅಪ್ ಭಾಗವಾಗಿ ದೆಹಲಿಯಲ್ಲಿರುವ ಜೈನ್ ಅವರ ವಸತಿ ಆವರಣಗಳು ಮತ್ತು ಇತರ ಕೆಲವು ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸೋಮವಾರ ನಡೆದ ದಾಳಿಯ ಸಂದರ್ಭದಲ್ಲಿ, ಇಡಿ ‘ವಿವಿಧ ದಾಖಲೆಗಳು’, ‘ಡಿಜಿಟಲ್ ದಾಖಲೆಗಳನ್ನು’ ವಶಪಡಿಸಿಕೊಂಡಿದೆ. ಹಣ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಚಿವರು “ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ” ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ ಸಚಿವ ಸತ್ಯೇಂದ್ರ ಜೈನ್ ಅವರು ಜೂನ್ 1 ರಿಂದ ಇಡಿ ಕಸ್ಟಡಿಯಲ್ಲಿದ್ದು, ಇಡಿ ಕಸ್ಟಡಿ ಅವಧಿಯನ್ನು ಜೂನ್ 9 ರವರೆಗೆ ಅವರೆಗೆ ವಿಸ್ತರಿಸಲಾಗಿದೆ. ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಏಪ್ರಿಲ್‌ನಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದೆ.

ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ಜೈನ್ ಅವರು ಷೇರುದಾರರಾಗಿದ್ದ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿದೆ.

ಜೈನ್ ದೆಹಲಿಯಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಖರೀದಿಸಿದ್ದಾರೆ ಮತ್ತು ಅವುಗಳ ಮೂಲಕ 16.39 ಕೋಟಿ ರೂ. ಮೌಲ್ಯದ ಕಪ್ಪು ಹಣವನ್ನು ವೈಟ್ ಮನಿಯನ್ನಾಗಿ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಇ ಸಂಪೂರ್ಣ ಸುಳ್ಳು ಪ್ರಕರಣ ಎಂದು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ