ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೆಹಲಿಯತ್ತ ಪ್ರಯಾಣ ಬೆಳೆಸಿದ ನಿತೀಶ್‌ ಕುಮಾರ್‌, ತೇಜಸ್ವಿ ಯಾದವ್; ಯಾವುದೇ ಹೇಳಿಕೆ ನೀಡದೇ ಅಚ್ಚರಿ ಮೂಡಿಸಿದ ನಾಯಕರ ನಡೆ..!

Twitter
Facebook
LinkedIn
WhatsApp
ದೆಹಲಿಯತ್ತ ಪ್ರಯಾಣ ಬೆಳೆಸಿದ ನಿತೀಶ್‌ ಕುಮಾರ್‌, ತೇಜಸ್ವಿ ಯಾದವ್; ಯಾವುದೇ ಹೇಳಿಕೆ ನೀಡದೇ ಅಚ್ಚರಿ ಮೂಡಿಸಿದ ನಾಯಕರ ನಡೆ..!

ನವದೆಹಲಿ: ಬಿಹಾರ ಸಿಎಂ ನಿತೀಶ್‌ ಕುಮಾರ್‌ (Nitish Kumar) ಮತ್ತು ಆರ್‌ಜೆಡಿ (RJD) ನಾಯಕ ತೇಜಸ್ವಿ ಯಾದವ್‌ (Tejashwi Yadav) ದೆಹಲಿಗೆ ಒಂದೇ ವಿಮಾನದಲ್ಲಿ ಪ್ರಯಾಣಿಸಿ ಅಚ್ಚರಿ ಮೂಡಿಸಿದ್ದಾರೆ.

ಇಂಡಿಯಾ ಒಕ್ಕೂಟ ನಿತೀಶ್‌ ಕುಮಾರ್‌ ಅವರನ್ನು ಮೈತ್ರಿ ಸೇರುವಂತೆ ಈಗಾಗಲೇ ಆಹ್ವಾನ ನೀಡಿದೆ. ಹೀಗಿದ್ದರೂ ನಿತೀಶ್‌ ಕುಮಾರ್‌ ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇಂದು ಇಂಡಿಯಾ (INDIA) ಮತ್ತು ಎನ್‌ಡಿಎ (NDA) ಒಕ್ಕೂಟದ ಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಭಾಗವಹಿಸಲು ಇಬ್ಬರೂ ನಾಯಕರು ಒಂದೇ ವಿಮಾನ ಹತ್ತಿದ್ದಾರೆ.

ವಿಮಾನದಲ್ಲಿ ನಿತೀಶ್‌ ಕುಮಾರ್‌ ಮುಂದುಗಡೆ ಸೀಟ್‌ ಕುಳಿತುಕೊಂಡಿದ್ದರೆ ಹಿಂದುಗಡೆ ತೇಜಸ್ವಿ ಯಾದವ್‌ ಆಸೀನರಾಗಿದ್ದಾರೆ. ಇಬ್ಬರು ನಾಯಕರು ವಿಮಾನದಲ್ಲಿ ಮಾತನಾಡಿದ್ದಾರಾ ಎನ್ನುವುದು ತಿಳಿದು ಬಂದಿಲ್ಲ.

ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಎನ್‌ಡಿಎ 293, ಇಂಡಿಯಾ 232 ಮತ್ತು ಇತರರು 18 ಸ್ಥಾನಗಳನ್ನು ಗೆದ್ದಿದ್ದಾರೆ. ಬಹುಮತಕ್ಕೆ 272 ಸದಸ್ಯರ ಅಗತ್ಯವಿದೆ. ಬಿಹಾರದಲ್ಲಿ ನಿತೀಶ್‌ ಕುಮಾರ್‌ ಮತ್ತು ತೇಜಸ್ವಿ ಯಾದವ್‌ ಪರಸ್ಪರ ವಿರೋಧಿಗಳು. ಹೀಗಿದ್ದರೂ ಎನ್‌ಡಿಎ ತೊರೆದು ನಿತೀಶ್‌ ಕುಮಾರ್‌ ಇಂಡಿಯಾ ಮೈತ್ರಿಗೆ ಹೋಗುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ.

ಬಿಹಾರ ಚುನಾವಣೆಯಲ್ಲಿ (Bihar Election) ಜೆಡಿಯು ಮತ್ತು ಬಿಜೆಪಿ ತಲಾ 12 ಸ್ಥಾನಗಳನ್ನು ಗೆದ್ದುಕೊಂಡಿವೆ. ಎಲ್‌ಜಿಪಿಆರ್‌ವಿ 5 ಆರ್‌ಜೆಡಿ 4, ಕಾಂಗ್ರೆಸ್‌ 3, ಸಿಪಿಐ(ಎಂ) 2, ಇತರರು 1 ಸ್ಥಾನವನ್ನು ಗೆದ್ದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist