ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ – ಹುಡುಕಿಕೊಟ್ಟವರಿಗೆ ನಗದು ಬಹುಮಾನ

Twitter
Facebook
LinkedIn
WhatsApp
WhatsApp Image 2023 02 18 at 3.42.10 PM

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕನೊಬ್ಬ (Youth) ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು (Missing), ಆತನನ್ನು ಹುಡುಕಿಕೊಟ್ಟವರಿಗೆ 5,000 ರೂ. ಬಹುಮಾನ ನೀಡುತ್ತೇವೆ ಎಂದು ಆತನ ಪೋಷಕರು ಹೇಳಿದ್ದಾರೆ.

ನಾಪತ್ತೆಯಾದ ಯುವಕನ ಪೋಷಕರು ಮಗನಿಗಾಗಿ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಆ ದಾರಿಯಾಗಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸರ್ಕಾರಿ ಬಸ್‌ಗಳಲ್ಲೂ ಹುಡುಕಾಟ ನಡೆಸಿದ್ದಾರೆ. ಆದರೆ ಯುವಕ ಮಾತ್ರ ಪತ್ತೆಯಾಗಿಲ್ಲ.

ನಾಪತ್ತೆಯಾಗಿರುವ ಯುವಕನನ್ನು ಹಾಸನ ಜಿಲ್ಲೆ (Hassan) ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ತಿಮ್ಲಾಪುರ ಗ್ರಾಮದ ಲವ (22) ಎಂದು ಗುರುತಿಸಲಾಗಿದೆ. ಯುವಕ ಲವ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದಾನೆ. ಆದರೂ ಆತನಿಗೆ ಒಂದಷ್ಟು ಜ್ಞಾನವಿದೆ, ಒಳ್ಳೆಯದು-ಕೆಟ್ಟದರ ಬಗ್ಗೆ ಅರಿವಿದೆ ಎಂದು ಪೋಷಕರು ತಿಳಿಸಿದ್ದಾರೆ. 

ಹಾಸನದಿಂದ ಪೋಷಕರ ಜೊತೆಯೇ ನಡೆದುಕೊಂಡು ಬಂದವನು ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದಾನೆ. ತಕ್ಷಣ ಜೊತೆಯಲ್ಲಿದ್ದವರು ಅಂಗಡಿ-ಮುಂಗಟ್ಟು, ಬಸ್, ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಆತನ ಸುಳಿವು ಸಿಕ್ಕಿಲ್ಲ. ಕೂಡಲೇ ಪೋಷಕರು ಇಲ್ಲೇ ಎಲ್ಲೋ ಸುತ್ತಮುತ್ತ ಇರುತ್ತಾನೆ ಎಂದು ಸ್ಥಳಿಯರ ಸಹಾಯ ಪಡೆದು ಹುಡುಕಾಟ ನಡೆಸಿದ್ದಾರೆ. ಆದರೂ ಆತ ಸಿಕ್ಕಿಲ್ಲ.

ಪೋಷಕರು ಆತನನ್ನು ಹುಡುಕಿಕೊಟ್ಟವರಿಗೆ 5,000 ರೂ. ಹಣ ನೀಡುತ್ತೇವೆ (Cash Prize) ಎಂದಿದ್ದಾರೆ. ಆದರೆ ಕೊಟ್ಟಿಗೆಹಾರದ ಸ್ಥಳೀಯ ಯುವಕರಾದ ಸಂತೋಷ್, ತನ್ವೀರ್, ಸಂಜಯ್, ನಂದೀಶ್ ಸೇರಿದಂತೆ ಹಲವರು ನಿಮ್ಮ ಹಣ ಬೇಡ, ನಿಮ್ಮ ಮಗ ಸಿಕ್ಕರೆ ಸಾಕೆಂದಿದ್ದಾರೆ. ಆತನ ಫೋಟೋವನ್ನು ಮೊಬೈಲ್‌ನಲ್ಲಿ ಬೇರೆಯವರಿಗೂ ಶೇರ್ ಮಾಡಿದ್ದು, ಪತ್ತೆಯಾದಲ್ಲಿ ತಿಳಿಸುವಂತೆ ಕೋರಿಕೊಂಡಿದ್ದಾರೆ. ಇದೀಗ ಆತನ ಪೋಷಕರು ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist