ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಗ್ನ ಚಿತ್ರ ವೈರಲ್ ಬೆದರಿಕೆ: ಯುವತಿಯಿಂದ ದೂರು

Twitter
Facebook
LinkedIn
WhatsApp
ನಗ್ನ ಚಿತ್ರ ವೈರಲ್ ಬೆದರಿಕೆ: ಯುವತಿಯಿಂದ ದೂರು

ಕೊಪ್ಪ: ‘ಮಹಮ್ಮದ್ ರೋಫ್ ಎಂಬಾತ ಸ್ನೇಹದ ಹೆಸರಿನಲ್ಲಿ ವಂಚಿಸಿದ್ದಾನೆ. ನನ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಯುವತಿಯೊಬ್ಬರು ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ.

‘ಈ ಹಿಂದೆ ಕಾಲೇಜು ವ್ಯಾಸಂಗ ಮಾಡುತ್ತಿದ್ದಾಗ ಮಹಮ್ಮದ್ ರೋಫ್ ಇನ್‌ಸ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದಾನೆ. ಆತನ ಭೇಟಿಗೆ ಒಪ್ಪದಿದ್ದಾಗ ವಾಟ್ಸ್‌ಆ್ಯಪ್‌ಗೆ ಎಡಿಟ್ ಮಾಡಿದ ಖಾಸಗಿ ಚಿತ್ರ ಕಳುಹಿಸಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದ. ನಂತರ ರೋಫ್, ಆತನ ಸ್ನೇಹಿತರು ಅಮಲು ಪದಾರ್ಥ ಕೊಟ್ಟು ಖಾಸಗಿ ಚಿತ್ರ, ವಿಡಿಯೊ ಮಾಡಿಕೊಂಡಿದ್ದರು’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಸಹೋದರನಿಂದ ದೂರು: ‘ಸಹೋದರಿ ಖಾಸಗಿ ಚಿತ್ರವನ್ನು ಮಹಮ್ಮದ್ ರೋಫ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಯುವತಿಯ ಸಹೋದರ ಸೈಬರ್ ಪೊಲೀಸ್ ಠಾಣೆಗೆ (ಸಿಇಎನ್), ಹರಿಹರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ