ಬುಧವಾರ, ಜೂನ್ 26, 2024
ಚಿಕನ್ ಕಬಾಬ್ ಗೆ ಕೃತಕ ಕಲರ್ ಬಳಸಿದರೆ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಫಿಕ್ಸ್..!-Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ-Tzachi Hanegbi - ಗಾಜಾದಲ್ಲಿ ಹಮಾಸ್ ಸರ್ಕಾರವನ್ನು ಬದಲಿಸುವ ಯೋಜನೆಯನ್ನು ಇಸ್ರೇಲ್ ಹೊರತರಲಿದೆ-ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!-ನಂದಿನಿ ಹಾಲಿನ ದರ ಏರಿಕೆ; ಎಷ್ಟು ಹೆಚ್ಚಾಗಲಿದೆ ಇಲ್ಲಿದೆ ಮಾಹಿತಿ-T20 ವಿಶ್ವಕಪ್ 2024: ಐತಿಹಾಸಿಕ ಗೆಲುವಿನೊಂದಿಗೆ ಸೆಮಿಫೈನಲ್​ಗೇರಿದ ಅಫ್ಘಾನಿಸ್ತಾನ; ಆಸ್ಟ್ರೇಲಿಯಾ ಔಟ್!-Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ .

Twitter
Facebook
LinkedIn
WhatsApp
ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ .

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಅವರಿಗೆ ಚಿತ್ರದುರ್ಗದ ಮುರುಘಾಮಠ ಕೊಡುವ ಪ್ರತಿಷ್ಠಿತ ಮರಣೋತ್ತರ ಬಸವಶ್ರೀ ಪುರಸ್ಕಾರ ನೀಡಲಾಗುವುದು ಎಂದು ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಘೋಷಣೆ ಮಾಡಿದ್ದಾರೆ.

ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದ್ದು, ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ಈ ಸಮಾರಂಭ ನಡೆಯಲಿದ್ದು, ಪುನೀತ್ ಪರವಾಗಿ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ನಟ ಶಿವರಾಜಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ನವೆಂಬರ್ 10 ರಂದು ಪುನೀತ್ ಮನೆಗೆ ಮುರುಘಾಶ್ರೀ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್​ ಮಾಡಿದ್ದ ಸಿದ್ದರಾಮಯ್ಯ, ‘ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ’ ಎಂದಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು