ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಮ ಹೋರಾಟ ಇರಬೇಕಾದದ್ದು ಒಕ್ಕೂಟ ವ್ಯವಸ್ಥೆಯ ನಮ್ಮ ಹಕ್ಕುಗಳ ಕುರಿತು: ಎಚ್ ಡಿ ಕುಮಾರಸ್ವಾಮಿ.

Twitter
Facebook
LinkedIn
WhatsApp
ನಮ್ಮ ಹೋರಾಟ ಇರಬೇಕಾದದ್ದು ಒಕ್ಕೂಟ ವ್ಯವಸ್ಥೆಯ ನಮ್ಮ ಹಕ್ಕುಗಳ ಕುರಿತು: ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಗೂಗಲ್ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ ಎಂದು ಪ್ರಶ್ನಿಸಿ ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ಸೇವೆ, ಹಿಂದಿ ಹೇರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರ ಭಾಷಾಭಿಮಾನವನ್ನು ಗೂಗಲ್, ಅಮೆಜಾನ್ ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ.

ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ.

ಗೂಗಲ್ ಆಲ್ಗಾರಿದಮ್‌ನ ಸಮಸ್ಯೆಯಿಂದಾಗಿ ಕನ್ನಡಕ್ಕೆ ಅಪಮಾನವಾಗಿರಬಹುದು. ಆದರೆ, ಗೂಗಲ್‌ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ?

ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ.

ಕೇಂದ್ರ ಸರ್ಕಾರದ ನೌಕರಿ ಸಿಗಬೇಕಿದ್ದರೆ ಹಿಂದಿ ಭಾಷೆ ಬರಬೇಕೆಂಬ ಷರತ್ತುಗಳು, ಹಿಂದಿಯಲ್ಲೇ ಪರೀಕ್ಷೆ ಬರೆಯಬೇಕೆಂಬ ನಿಬಂಧನೆಗಳು, ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನಗಳು. ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು. ನಮ್ಮಹೋರಾಟಗಳು ಇಂಥ ಮಾರಕ ಅಜೆಂಡಾಗಳ ವಿರುದ್ಧ ಇರಬೇಕು ಎಂಬುದು ನನ್ನ ಅಭಿಪ್ರಾಯ.
ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದರೆ ಮಾನ್ಯತೆ ಸಿಗುವುದಿಲ್ಲ, ಗಂಭೀರವಾಗಿಯೂ ಆಲಿಸುವುದಿಲ್ಲ. ಕೇಂದ್ರದ ಪ್ರಕಟಣೆಗಳು ಸ್ಥಳೀಯ ಭಾಷೆಯಲ್ಲಿ ಸಿಗುವುದಿಲ್ಲ. ಕೇಂದ್ರದ ಸೇವೆಗಳು ಕನ್ನಡದಲ್ಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವುದಿಲ್ಲ. ವೆಬ್‌ಸೈಟ್‌ಗಳಲ್ಲಿ ಕನ್ನಡವಿಲ್ಲ. ಗ್ರಾಹಕ ಸೇವೆ ಕನ್ನಡದಲ್ಲಿ ಸಿಗುವುದಿಲ್ಲ.

ನಮ್ಮ ಜಿಎಸ್‌ಟಿ ಪಾಲು ನಮಗೆ ಸಿಗುವುದಿಲ್ಲ, ನೆರೆ–ಬರ ಪರಿಹಾರವಿಲ್ಲ, ಕನ್ನಡಿಗರು ಉಸಿರುಗಟ್ಟಿ ಸಾಯುತ್ತಿದ್ದರೂ ಆಮ್ಲಜನಕ ನೀಡುವುದಿಲ್ಲ, ಕಾಯಿಲೆಗೆ ಔಷಧ ನೀಡುವುದಿಲ್ಲ.

ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಿ ವರ್ತಿಸಬೇಕಾಗಿದೆ. ಹಲವು ಮಾಧ್ಯಮಗಳು ಆ ಕೆಲಸ ಮಾಡುತ್ತಿವೆ. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಗೆ ಪ್ರಧಾನ.
ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೂ ತಬ್ಬಲಿ ಮಕ್ಕಳಂತೆ ಬಾಳುವುದಿದೆಯಲ್ಲ ಅದು ಅಪಾಯಕಾರಿ. ಕನ್ನಡಿಗರು ತಬ್ಬಲಿಗಳಲ್ಲ. ರಾಜ್ಯ ಕಟ್ಟಿದವರು, ರಾಜ್ಯ ಆಳಿದವರು, ರಾಜ್ಯ ವಿಸ್ತರಿಸಿದವರು. ಅದು ನಮ್ಮ ಐತಿಹಾಸಿಕ ಗುಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು