ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಯನತಾರಾ-ವಿಘ್ನೇಶ್‌ ಅವಳಿ ಮಕ್ಕಳ ವಿವಾದಕ್ಕೆ ಹೊಸ ಟ್ವಿಸ್ಟ್ : ಆರು ವರ್ಷದ ಹಿಂದೆಯೇ ತಾರಾ ಜೋಡಿ ವಿವಾಹ?

Twitter
Facebook
LinkedIn
WhatsApp
ನಯನತಾರಾ-ವಿಘ್ನೇಶ್‌ ಅವಳಿ ಮಕ್ಕಳ ವಿವಾದಕ್ಕೆ ಹೊಸ ಟ್ವಿಸ್ಟ್ : ಆರು ವರ್ಷದ ಹಿಂದೆಯೇ ತಾರಾ ಜೋಡಿ ವಿವಾಹ?

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರ-ವಿಘ್ನೇಶ್ ಶಿವನ್ ದಂಪತಿ ಭಾರತೀಯ ಬಾಡಿಗೆ ತಾಯ್ತನ ಕಾನೂನು ಉಲ್ಲಂಘನೆ ಮಾಡಿ ಅವಳಿ ಮಕ್ಕಳನ್ನ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.  ಆದರೆ ಈಗ ಈ ಪ್ರಕರಣ ತಿರುವು ಪಡೆದುಕೊಂಡಿದ್ದು, ಕಾನೂನು ರೀತಿಯಲ್ಲೇ ಮಕ್ಕಳನ್ನ ಪಡೆದಿದ್ದಾರೆ ಎಂದು ದಾಖಲೆಗಳನ್ನ ಸಲ್ಲಿಕೆ ಮಾಡಲಾಗಿದೆಯಂತೆ.

ನಯನತಾರಾ–ವಿಘ್ನೇಶ್‌ ದಂಪತಿಗೆ ಬಾಡಿಗೆ ತಾಯ್ತನದಿಂದ ಜನಿಸಿದ ಮಕ್ಕಳ ವಿವಾದಕ್ಕೀಗ ಹೊಸ ಟ್ವಿಸ್ಟ್‌ ಸಿಕ್ಕಿದೆ. ಇಬ್ಬರೂ 6 ವರ್ಷಗಳ ಹಿಂದೆಯೇ ಮದುವೆಯಾಗಿದ್ದರು ಎಂಬ ಅಚ್ಚರಿಯ ಮಾಹಿತಿ ಅವರು ಆರೋಗ್ಯ ಇಲಾಖೆಗೆ ಸಲ್ಲಿಸಿರುವ ಪ್ರಮಾಣಪತ್ರದಿಂದ ಬಹಿರಂಗಗೊಂಡಿದೆ.

ಕಳೆದ ಭಾನುವಾರ ನಯನತಾರಾ ಹಾಗೂ ವಿಘ್ನೇಶ್‌ ದಂಪತಿ ಬಾಡಿಗೆ ತಾಯ್ತನದಿಂದ ಅವಳಿ ಮಕ್ಕಳನ್ನು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ ಮದುವೆಯಾಗಿ 4 ತಿಂಗಳಿನೊಳಗೆ ಹೇಗೆ ಇವರು ಮಕ್ಕಳನ್ನು ಪಡೆದರು ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿತ್ತು. ಇದರಿಂದ ಎಚ್ಚೆತ್ತ ತಮಿಳುನಾಡು ಸರ್ಕಾರ ಮಕ್ಕಳನ್ನು ಪಡೆದ ಬಾಡಿಗೆ ತಾಯ್ತನದ ಪ್ರಕ್ರಿಯೆ ಕುರಿತು ಪ್ರಶ್ನೆಗಳನ್ನು ಕೇಳಿ, ವಿಚಾರಣೆ ನಡೆಸುವುದಾಗಿ ಹೇಳಿತ್ತು.

ಇದೀಗ ಈ ದಂಪತಿ ತಮಿಳುನಾಡು ಆರೋಗ್ಯ ಇಲಾಖೆಗೆ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ ಈ ಇಬ್ಬರು 6 ವರ್ಷಗಳ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್‌ ಮಾಡಿಕೊಂಡಿದ್ದಾರೆ. ಅದರ ದಾಖಲೆಗಳನ್ನೀಗ ಆರೋಗ್ಯ ಇಲಾಖೆಗೆ ಸಲ್ಲಿಸಿದ್ದಾರೆ.

ಕಳೆದ ಜೂನ್ 9 ರಂದು ನಯನತಾರ ಮತ್ತು ವಿಘ್ನೇಶ್ ಶಿವನ್ ಸಂಪ್ರದಾಯವಾಗಿ ಗುರು-ಹಿರಿಯರ ಆಶೀರ್ವಾದೊಂದಿಗೆ ಮದುವೆಯಾಗಿದ್ದರು. ಮದುವೆಯಾಗಿ ನಾಲ್ಕು ತಿಂಗಳು ಕಳೆದಿದ್ದು, 6 ದಿನಗಳ ಹಿಂದೆಯಷ್ಟೇ ಅವಳಿ ಮಕ್ಕಳಿಗೆ ತಂದೆ-ತಾಯಿ ಆಗಿದ್ದೇವೆ ಎಂದು ವಿಘ್ನೇಶ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದರು.  ನಾಲ್ಕು ತಿಂಗಳಲ್ಲಿ ಮಕ್ಕಳನ್ನ ಪಡೆದರು ಎನ್ನುವ ವಿಚಾರ ಹೊರಬೀಳುತ್ತಿದ್ದಂತೆ ನಯನತಾರ ದಂಪತಿ ವಿರುದ್ಧ ಬಲವಾದ ಆರೋಪಗಳು ಕೇಳಿಬಂದಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ