ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಳೆಯಿಂದ ಮಂಗಳೂರಿನಲ್ಲಿ ನಡೆಯಲಿದೆ 'ಸ್ಟ್ರೀಟ್ ಫುಡ್ ಫಿಯೆಸ್ಟಾ'

Twitter
Facebook
LinkedIn
WhatsApp
WhatsApp Image 2023 03 21 at 9.14.21 PM

ಮಾರ್ಚ್ 22 ರಿಂದ ಮಾರ್ಚ್ 26 ರ ವರೆಗೆ ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ನಡೆಯಲಿದೆ ಸಂಜೆ 5ರಿಂದ ರಾತ್ರಿ 11ರವರೆಗೆ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮೂಲಕ ಮಣ್ಣಗುಡ್ಡೆ ಗುರ್ಜಿ ಜಂಕ್ಷನ್‌ವರೆಗೆ (ರಸ್ತೆಯ ಒಂದು ಮಗ್ಗುಲಲ್ಲಿ ) ಆಹಾರೋತ್ಸವ ಆಯೋಜಿಸಲಾಗಿದೆ. ವಿಶೇಷವಾಗಿ ತುಳುನಾಡಿನ ಸಾಂಪ್ರದಾಯಿಕ ತಿಂಡಿ ತಿನಸುಗಳು ಸೇರಿದಂತೆ ಹೊರ ರಾಜ್ಯಗಳ ಸಸ್ಯಾಹಾರ ಹಾಗೂ ಮಾಂಸಾಹಾರ ಆಹಾರಗಳಿಗೆ ಆದ್ಯತೆ ಕಲ್ಪಿಸಲಾಗುತ್ತದೆ. ತುಳುನಾಡಿನ ಆಹಾರ ವೈವಿಧ್ಯತೆ ಪರಿಚಯಿಸುವುದರೊಂದಿಗೆ ಸ್ವಉದ್ಯೋಗಕ್ಕೆ ಪೂರಕ ವೇದಿಕೆ ನಿರ್ಮಿಸುವ ಪ್ರಯತ್ನ ಇದಾಗಿದೆ

ಪ್ರಸಿದ್ಧ ಹೋಟೆಲ್ ಉದ್ಯಮ, ಐಸ್ ಕ್ರೀಮ್ ಸೇರಿದಂತೆ ಮನೆ ಉತ್ಪನ್ನಗಳು, ಸ್ವಾವಲಂಬಿ ಉತ್ಪಾದಕರು ಆಹಾರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಯಾ ಸಮಾಜದ ಪ್ರಮುಖ ತಿಂಡಿ-ತಿನಸುಗಳೂ ಇರಲಿದೆ. ಜತೆಗೆ ಮನೋರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕರಾವಳಿಯಲ್ಲಿ ಹೊಸ ಭಾಷ್ಯ ಬರೆಯಲಿದೆ ಎಂದರು. ಕುಟುಂಬ ಸಮೇತರಾಗಿ ಗೆಳೆಯರ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಹಾಗೂ ಇತರ ಶುಭ ಕಾರ್ಯಕ್ರಮವನ್ನು ಇಲ್ಲಿ ಆಚರಿಸಬಹುದು. ಸಿನಿಮಾ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ನೃತ್ಯ, ಹಾಡು, ಮಿಮಿಕ್ರಿ, ನಟನೆ, ಬೀದಿ ಜಾದೂ, ಕರೊಕೆ, ವಾದ್ಯಗೋಷ್ಠಿ, ಬೀದಿ ಸರ್ಕಸ್, ಸೈಕಲ್ ಬ್ಯಾಲೆನ್ಸ್, ಬಗ್ಗಿ ವಾಹನ, ಗೇಮ್ಸ್, ಜುಂಬಾ, ಫಿಟ್ ನೆಸ್ ಕ್ರೀಡೆ, ಯೋಗ ಹಾಗೂ ಇನ್ನಷ್ಟು ಪ್ರದರ್ಶನ ಮತ್ತು ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ದೇಹದಾರ್ಡ್ಯ, ಪಟಾಕಿ ಪ್ರದರ್ಶನ, ಪಾದ ಮಸಾಜ್, ಚೆಂಡೆ ಮತ್ತು ನಾಸಿಕ್ ಬ್ಯಾಂಡ್, ಕಿರು ಮ್ಯೂಸಿಕ್ ಬ್ಯಾಂಡ್, ಬೆಂಕಿ ನೃತ್ಯ, ಸೆಲ್ಲಿ ಕೌಂಟರ್, ಫ್ಲಾಶ್ ಬೆಳಕಿನಾಟ ಆಯೋಜಿಸಲಾಗಿದೆ

ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ನೀಡುವ ಸಲುವಾಗಿ ವಿಶೇಷವಾಗಿ ವರ್ಣ ರಂಜಿತ ವಿದ್ಯುತ್ ದೀಪಾಲಂಕಾರ, ತಾಲೀಮು ಪ್ರದರ್ಶನ, ಸಂಗೀತ ಕಾರ್ಯಕ್ರಮ, ಹುಲಿವೇಷ ಬಣ್ಣಗಾರಿಕೆ ಸ್ಪರ್ಧೆ, ಗೂಡು ದೀಪ ಮುಂತಾದವುಗಳನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪ್ರತಿ ಜಂಕ್ಷನ್‌ಗಳಲ್ಲಿ ನಾಲ್ಕು ವೇದಿಕೆಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳಿಗಾಗಿ ಪ್ರತ್ಯೇಕ ವಲಯ, ಕುದುರೆ ಸವಾರಿ, ಒಂಟೆ ಸವಾರಿ, ಸೆಲ್ಫಿ ಬೂತ್, ಹಳೆಯ ಮಾದರಿಯ ಕಾರುಗಳ ಪ್ರದರ್ಶನ ಕಾರ್ಯಕ್ರಮದ ಪ್ರಮುಖ
ಆಕರ್ಷಣೆಯಾಗಿರಲಿದೆ. ಸುಮಾರು 200ರಷ್ಟು ಸ್ಟಾಲ್‌ಗಳು ಇರಲಿದ್ದು, ವಾಹನಗಳಿಗೆ ಕರಾವಳಿ ಉತ್ಸವ ಮೈದಾನ ಹಾಗೂ ಮಣ್ಣಗುಡ್ಡಗಳಲ್ಲಿ ಪಾರ್ಕಿಂಗ್ ಅವಕಾಶ ಕಲ್ಪಿಸಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist