ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ 7.1 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

Twitter
Facebook
LinkedIn
WhatsApp
Earthquake

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ (New Zealand) ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳ (Kermadec Islands) ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 7.1 ತೀವ್ರತೆಯ ಭಾರೀ ಭೂಕಂಪ (Earthquake) ಸಂಭವಿಸಿದೆ. ಭೂಕಂಪ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

 

ಭಾರೀ ಭೂಕಂಪ ಉಂಟಾದ ತಕ್ಷಣ ಸುನಾಮಿ ಎಚ್ಚರಿಕೆ (Tsunami Alert) ನೀಡಲಾಗಿದೆ. ಭೂಕಂಪ ಸಂಭವಿಸಿದ 300 ಕಿಮೀ ವ್ಯಾಪ್ತಿಯ ಪ್ರದೇಶದೊಳಗೆ ಸುನಾಮಿಯ ಭೀತಿಯಿದೆ. ಸದ್ಯ ಈ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಭೂಕಂಪದ ಬಳಿಕ ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ನ್ಯೂಜಿಲೆಂಡ್‌ಗೆ ಯಾವುದೇ ಸುನಾಮಿಯ ಭೀತಿ ಇಲ್ಲ ಎಂದು ತಿಳಿಸಿದೆ.

ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್ ಒಟ್ಟುಗೂಡುವ ಪ್ರದೇಶದಲ್ಲಿ ಭಾರೀ ಭೂಕಂಪಗಳು ಸಂಭವಿಸುತ್ತದೆ. ಈ ಪ್ರದೇಶ ರಿಂಗ್ ಆಫ್ ಫೈರ್‌ಗೆ ಅತ್ಯಂತ ಸಮೀಪವಿದೆ ಮಾತ್ರವಲ್ಲದೇ ಈ ಪ್ರದೇಶದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಲೇ ಇರುತ್ತದೆ. ವಾರ್ಷಿಕವಾಗಿ ನ್ಯೂಜಿಲೆಂಡ್‌ನಲ್ಲಿ ಸಾವಿರಾರು ಭೂಕಂಪಗಳು ನಡೆಯುತ್ತವೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ