ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು (ಕನ್ನಡ ಸೇರಿದಂತೆ) ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್ಗೆ ಅದು ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾದಂತಾಗಿದೆ.
ಇದರ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಹೈಕೋರ್ಟ್, ‘ಕೇಂದ್ರ ಸರ್ಕಾರವೇ ಈ ಸಂಬಂಧ ಸ್ಪಷ್ಟನೆ ನೀಡಿ ಪ್ರಮಾಣಪತ್ರ ಸಲ್ಲಿಸಿದೆ. ಹೀಗಾಗಿ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯದ ಕುರಿತ ನಿಲುವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗುವುದು’ ಎಂದು ತಿಳಿಸಿದೆ.
ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ ಟ್ರಸ್ಟ್ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ‘ಎನ್ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಪ್ರಮಾಣಪತ್ರದಲ್ಲಿ ಸಷ್ಟಪಡಿಸಿದೆ. ಹೀಗಾಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ.
ಆದ್ದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಜಿದಾರ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆಯ ಅಧ್ಯಯನ ಮುಂದುವರಿಸಲು ಸ್ವತಂತ್ರರು ಎಂಬ ಆದೇಶ ಮಾಡಿ, ನಮ್ಮ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist