ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಆರೋಪಿಗೆ ಜೀವಾವಧಿ ಶಿಕ್ಷೆ
Twitter
Facebook
LinkedIn
WhatsApp
ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಬಂಟ್ವಾಳ ಉಪವಿಭಾಗದ ಐಪಿಎಸ್ ಸೈದುಲ್ ಅಡಾವತ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯ ಗೊಂಡು ಆರೋಪ ಸಾಬೀತಾಗಿ ಶಿಕ್ಷೆ ಪ್ರಕಟಿಸಲಾಗಿದೆ.
ಆರೋಪಿಗೆ 10 ವರ್ಷ ಜೈಲು ವಾಸ, 10 ಸಾವಿರ ದಂಡ, ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ, 6 ತಿಂಗಳ ಜೈಲುವಾಸ, 1 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶ ಹೊರಡಿಸಲಾಗಿದೆ