ಪುತ್ತೂರಿನ ಚೈತ್ರಾ ಇಲೆಕ್ಟ್ರಾನಿಕ್ಸ್ ಶಾಪ್ನ ಮಾಲಕ ಅಂಗಡಿಯಲ್ಲೇ ನೇಣಿಗೆ ಶರಣು
Twitter
Facebook
LinkedIn
WhatsApp
ಪುತ್ತೂರು, ಏ 29 : ಪುತ್ತೂರು ತಾಲೂಕಿನ ದರ್ಬೆ ಸಮೀಪದ ವ್ಯಕ್ತಿಯೋರ್ವರು ತಮ್ಮ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49) ಎಂದು ಗುರುತಿಸಲಾಗಿದೆ.
ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಳಿ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಅನ್ನು ಹೊಂದಿದ್ದು, ಇಂದು ತಮ್ಮ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಮೇಶ್ ಜೇಸಿಐನ ಸಕ್ರೀಯ ಸದಸ್ಯರಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.