ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ. ಅಪ್ಪು (Appu) ಪುಣ್ಯಭೂಮಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ತನಕ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ರಾಜ್ಯದ ನಾನಾ ಕಡೆಗಳಲ್ಲಿ ಅಭಿಮಾನಿಗಳು ಹಲವು ರೀತಿಯಲ್ಲಿ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸುತ್ತಾರೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವೆಂದರೆ ಸಂಭ್ರಮಕ್ಕೇನೂ ಕೊರತೆ ಕಾಣುತ್ತಿಲ್ಲ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಬೆಳಗ್ಗೆ ಎಂಟು ಗಂಟೆಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬಕ್ಕೆ ಚಾಲನೆ ನೀಡಲಾಗುತ್ತಿದೆ. ಬೆಳಗ್ಗೆ 10 ರಿಂದ ಅನ್ನ ಸಂತರ್ಪಣೆ ಹಾಗೂ ಸಂಜೆ 6 ಗಂಟೆಗೆ ಅಪ್ಪು ಹಿಟ್ ಹಾಡುಗಳ ಸಂಗೀತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.