ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ

Twitter
Facebook
LinkedIn
WhatsApp
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ

ಇದು ಪ್ರಧಾನಿ ನರೇಂದ್ರ ಮೋದಿ ಸೋಲಿನ ಭೀತಿಯಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ

‘ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ’- ಸಿಎಂ

ಚಿಕ್ಕಮಗಳೂರು: ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು.ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು.

ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ