ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ; ಕಲಾಕೃತಿಗೆ ಮೋದಿ ಫಿದಾ

Twitter
Facebook
LinkedIn
WhatsApp
Narendra Modi ಪ್ರಧಾನಿ ಮೋದಿ

ದೆಹಲಿ, ಜುಲೈ 25: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಪ್ರಸ್ತಾಪಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್​ಡಿ ದೇವೇಗೌಡ ಅವರು ವೀಲ್​ಚೇರ್​ನಲ್ಲಿ ಬಂದು ಭೇಟಿ ಮಾಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದು, ಮಹತ್ವದ ಚರ್ಚೆ ಮಾಡಲಾಗಿದೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಬಜೆಟ್​ ಮಂಡಿಸಿದ್ದು, ಪ್ರತ್ಯೇಕವಾಗಿ ಕರ್ನಾಟಕಕ್ಕೆ ಏನು ಘೋಷಿಸಿರಲಿಲ್ಲ. ಹಾಗಾಗಿ ಟೀಕೆ ಕೂಡ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಹೆಚ್​ಡಿ ಕುಮಾರಸ್ವಾಮಿ ಬೇರೆ ಬೇರೆ ಯೋಜನೆಗಳನ್ನು ಕರ್ನಾಟಕ್ಕೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಅದರ ಬೆನ್ನೆಲ್ಲೇ ಇದೀಗ ಪ್ರಧಾನಿ ಮೋದಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ಲೋಕಕಲ್ಯಾಣ ಮಾರ್ಗವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರನ್ನು ಭೇಟಿ ಮಾಡಿರುವುದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಮತ್ತು ದೃಷ್ಟಿಕೋನವು ತುಂಬಾ ಆಳ ಮತ್ತು ಮೌಲ್ಯಯುತವಾದದ್ದು.

ಅವರು ನನಗೆ ನೀಡಿದ ಕಲಾಕೃತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯನ್ನು ನೆನಪಿಸಿತು ಎಂದು ತಮ್ಮ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಹೆಚ್​.ಡಿ.ದೇವೇಗೌಡ, ದುರಂತ ನಡೆದು 6 ದಿನವಾದ್ರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೇಟಿ ಬಳಿಕ ಸೇನಾ ತಂಡ ಕಾರ್ಯಾಚರಣೆ ಮಾಡುತ್ತಿದೆ. ಆ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಭೇಟಿ ನೀಡಿ ಪರಿಶೀಲಿಸಿದರು ಎಂದಿದ್ದಾರೆ. ಇದು ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಅನ್ನೋದನ್ನು ತೋರಿಸುತ್ತೆ. ಜನರು ಸತ್ತಿದ್ದಾರೆ, ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ ಲೋಕಸಭಾ ಚುನಾವಣೆಯ ಬಳಿಕ ಮೋದಿ ಅವರು ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಅಧ್ಯಾತ್ಮದ ಪ್ರಿಯ ತಾಣ ʻವಿವೇಕಾನಂದ ರಾಕ್ ಸ್ಮಾರಕʼಕ್ಕೆ ಭೇಟಿ ನೀಡಿದ್ದರು. ಇದರ ನೆನಪಿನಾರ್ಥವಾಗಿ ವಿವೇಕಾನಂದ ಮೂರ್ತಿಯ ಮುಂದೆ ಧ್ಯಾನಸ್ಥರಾಗಿರುವ ಮೋದಿ ಅವರ ಕಲಾಕೃತಿಯನ್ನು ಉಡುಗೊರೆಯಾಗಿ ದೇವೇಗೌಡರು ನೀಡಿದ್ದಾರೆ. ಇದನ್ನು ಸ್ವೀಕರಿಸಿದ ಮೋದಿ, ಇದು ಕನ್ಯಾಕುಮಾರಿಗೆ ಭೇಟಿ ನೀಡಿದ ಕ್ಷಣಗಳತ್ತ ನನ್ನ ಮನಸ್ಸನ್ನು ಸೆಳೆಯಿತು. ಅದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಬಜೆಟ್ ಬಗ್ಗೆ ಜಾಗೃತಿ ಸಭೆ; ರಾಜ್ಯ ಘಟಕಗಳಿಗೂ ಬಿಜೆಪಿ ಹೈಕಮಾಂಡ್ ಟಾಸ್ಕ್

ನವದೆಹಲಿ: ಬಜೆಟ್‌ನಲ್ಲಿ (Union Budget 2024) ವಿರೋಧ ಪಕ್ಷಗಳ ಆಡಳಿತ ರಾಜ್ಯಗಳಿಗೆ ತಾರತಮ್ಯ ಮಾಡಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯೆಯಾಗಿ ದೇಶಾದ್ಯಂತ ಸಭೆ ನಡೆಸಿ ಬಜೆಟ್ ಮತ್ತು ಜನಸಾಮಾನ್ಯರಿಗೆ ಅದರ ಲಾಭಗಳನ್ನು ಮನವರಿಕೆ ಮಾಡಲು ಬಿಜೆಪಿ (BJP) ನಿರ್ಧರಿಸಿದೆ.

ಸಂಸತ್ ಅಧಿವೇಶನದ ನಡುವೆ ಶನಿವಾರ ಮತ್ತು ಭಾನುವಾರ ಈ ಜಾಗೃತಿ ಸಭೆಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ. ಕೇಂದ್ರ ಸಚಿವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ವಿವಿಧ ಪ್ರಮುಖ ಪ್ರದೇಶಗಳಲ್ಲಿ ಸಭೆ ನಡೆಸಿ ಬಜೆಟ್ ಬಗ್ಗೆ ಜನರೊಂದಿಗೆ ಚರ್ಚಿಸಲಿದ್ದಾರೆ. ಸಂಸದರು ಆಯಾ ಕ್ಷೇತ್ರಗಳಲ್ಲಿ ಸಭೆ ನಡೆಸಲು ಸೂಚಿಸಲಾಗಿದೆ.

ಚಿಂತಕರ ಸಭೆಗಳನ್ನು ಆಯೋಜಿಸಲಾಗುವುದು, ಇದರಲ್ಲಿ PHD ಚೇಂಬರ್ ಆಫ್ ಕಾಮರ್ಸ್‌ನ ಜನರನ್ನು ಆಹ್ವಾನಿಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿರ್ದೇಶನದಂತೆ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ಕಾರ್ಯಕ್ರಮಗಳು ಬಡವರು, ರೈತರು, ಎಸ್‌ಸಿ-ಎಸ್‌ಟಿಗಳು ಮತ್ತು ಎಂಎಸ್‌ಎಂಇಗಳಲ್ಲಿ ಉದ್ಯೋಗದಲ್ಲಿರುವವರಿಗೆ ಬಜೆಟ್‌ನ ಪ್ರಯೋಜನಗಳನ್ನು ಎತ್ತಿ ತೋರಿಸಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಇಷ್ಟೇ ಅಲ್ಲದೇ ಪಕ್ಷದ ರಾಜ್ಯ ಘಟಕಗಳಿಗೆ ಪದಾಧಿಕಾರಿಯನ್ನು ನೇಮಿಸಲು ಮತ್ತು ಪ್ರಚಾರ ಪೂರ್ಣಗೊಂಡ ನಂತರ ವರದಿಯನ್ನು ಸಲ್ಲಿಸಲು ಹೇಳಿದೆ. ತಮ್ಮ ವೈಯಕ್ತಿಕ ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬಜೆಟ್‌ನ ವಿವಿಧ ಅಂಶಗಳನ್ನು ಹೈಲೈಟ್ ಮಾಡಲು ನಾಯಕರನ್ನು ಸೂಚಿಸಿದೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಿಎಂಗಳಿಗೆ ಸುದ್ದಿಗೋಷ್ಠಿ ನಡೆಸಲು ತಿಳಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist