ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಯುಪಿಯಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ ‘ಸುಪ್ರೀಂ’ಗೆ ಜಮಿಯತ್ ಅರ್ಜಿ

Twitter
Facebook
LinkedIn
WhatsApp
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಯುಪಿಯಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ ‘ಸುಪ್ರೀಂ’ಗೆ ಜಮಿಯತ್ ಅರ್ಜಿ

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತಂತೆ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10ರಂದು ಗಲಭೆ ಸೃಷ್ಟಿಸಿದ್ದವರ ಮನೆಗಳನ್ನು ಉತ್ತರ ಪ್ರದೇಶ ಸರ್ಕಾರ ನೆಲಸಮ ಮಾಡುತ್ತಿದ್ದು ಈ ಕ್ರಮವನ್ನು ನಿಲ್ಲಿಸುವಂತೆ ನಿರ್ದೇಶನ ನೀಡುವಂತೆ ಜಮಿಯತ್ ಉಲಮಾ-ಇ-ಹಿಂದ್ ಎಂಬ ಮುಸ್ಲಿಂ ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ಎರಡು ಹೊಸ ಅರ್ಜಿಗಳನ್ನು ಸಲ್ಲಿಸಿದೆ.

ಈ ಹಿಂದೆ ಸಹ ರಾಷ್ಟ್ರ ರಾಜಧಾನಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿನ ಕಟ್ಟಡಗಳನ್ನು ನೆಲಸಮಗೊಳಿಸುವ ವಿಷಯದ ಕುರಿತು ಸಂಘಟನೆಯೂ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿತ್ತು. ಈ ವಿಷಯದಲ್ಲಿ ಕಳೆದ ವಿಚಾರಣೆಯ ನಂತರ ಕೆಲವು ಹೊಸ ಬೆಳವಣಿಗೆಗಳು ನಡೆದಿದ್ದು, ಈ ನ್ಯಾಯಾಲಯದ ಗಮನಹರಿಸಬೇಕು ಎಂದು ಹೊಸ ಅರ್ಜಿಯನ್ನು ಸಲ್ಲಿಸಿದೆ.

ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹಾಗೂ ಪಕ್ಷದಿಂದ ಉಚ್ಛಾಟನೆಗೊಂಡಿರುವ ನವೀನ್ ಜಿಂದಾಲ್ ಪ್ರವಾದಿ ಮೊಹಮ್ಮದ್ ಕುರಿತಂತೆ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉತ್ತರಪ್ರದೇಶ ಕಾನ್ಪುರದಲ್ಲಿ ಪ್ರತಿಭಟನೆಗೆ ನಡೆಸಲಾಗಿತ್ತು. ನಂತರ ಇದು ಹಿಂಸಾಚಾರಕ್ಕೆ ತಿರುಗಿದ್ದು ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದು ಹಲವು ಸಾರ್ವಜನಿಕ ಆಸ್ತಿ, ಪಾಸ್ತಿಗಳಿಗೆ ಹಾನಿ ಮಾಡಿದ್ದರು.

ಹೀಗಾಗಿ ಯೋಗಿ ಸರ್ಕಾರ ಗಲಭೆಗೆ ಕುಮ್ಮಕ್ಕು ನೀಡಿದ್ದ ಮಾಸ್ಟರ್ ಮೈಂಡ್ ಗಳ ಮನೆಗಳನ್ನು ನೆಲಸಮಗೊಳಿಸುತ್ತಿದೆ. ಅಕ್ರಮ ನೆಲಸಮ ಕುರಿತಂತೆ ಸುಪ್ರೀಂ ಕೋರ್ಟ್ ಪ್ರಸ್ತುತ ವಿಷಯವನ್ನು ವಿಚಾರಣೆ ನಡೆಸುತ್ತಿರುವಾಗಲೇ ಇಂತಹ ಕಾನೂನುಬಾಹಿರ ಕ್ರಮಗಳನ್ನು ಅಳವಡಿಸಿಕೊಳ್ಳುವುದು ನೈಸರ್ಗಿಕ ನ್ಯಾಯದ ತತ್ವಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ ಎಂದು ಜಮಿಯಾತ್ ಮನವಿಯಲ್ಲಿ ಆರೋಪಿಸಿದೆ.

ರಾಜ್ಯದಲ್ಲಿ ಜೂನ್ 10ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ಎಂಟು ಜಿಲ್ಲೆಗಳಿಂದ 333 ಜನರನ್ನು ಬಂಧಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ