ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

Twitter
Facebook
LinkedIn
WhatsApp
ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಅಂತಿಮ ಯಾತ್ರೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸಚಿವರು ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಈ ವೇಳೆ ಆಗಮಿಸಿದ ಸಚಿವರಾದ ಸುನಿಲ್ ಕುಮಾರ್ , ಎಸ್ . ಆಂಗಾರ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜಾ ಅವರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ಆಕ್ರೋಶಿತ ಹಿಂದೂ ಪರ ಸಂಘಟನೆಯ ನೂರಾರು ಕಾರ್ಯಕರ್ತರು ಸರಕಾರದ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿ ಧಿಕ್ಕಾರ ಕೂಗಿದರು. ಹತ್ಯೆ ಆರೋಪಿಗಳ ವಿರುದ್ಧ ಕಠಿಣಾತಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸಾವಿರಾರು ಜನರ ಆಕ್ರೋಶದ ನಡುವೆ ಬಿಜೆಪಿಯ ನಾಯಕರೆಲ್ಲರೂ ಮೌನಕ್ಕೆ ಶರಣಾಗಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಲಾಠಿ ಬೀಸಿದ ಪೊಲೀಸರು
ಸಾವಿರಾರು ಜನ ಜಮಾವಣೆ ಗೊಂಡು, ಕಲ್ಲು ತೂರಾಟ ನಡೆದು ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದಾರೆ.

ಸುಳ್ಯ ತಾಲೂಕಿನ ಬೆಳ್ಳಾರೆ ನೆಟ್ಟಾರು ನಿವಾಸ ಯಾಗಿರುವ ಪ್ರವೀಣ್‌ ಅವರ ನಿವಾಸದಲ್ಲಿ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ನಿವಾಸದಲ್ಲಿ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಲಾಗಿದ್ದು ಸಾವಿರಾರು ಜನರು ಜಮಾವಣೆಗೊಂಡಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಚಿಕನ್‌ ಸೆಂಟರ್‌ ಮುಚ್ಚುವ ವೇಳೆ ದುಷ್ಕರ್ಮಿಗಳು ಪ್ರವೀಣ್‌ ಅವರನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವಾರಣ ನಿರ್ಮಾಣವಾಗಿದ್ದು, ವ್ಯಾಪಕ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ