ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ- ವಿಷ ಸೇವಿಸಿ ಯುವತಿ ಆತ್ಮಹತ್ಯೆ
ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ತಾಲೂಕಿನ ಕುದುರೆಮುಖ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.
ಜನವರಿ 10 ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಿನ್ನೆ ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ.
ಆದ್ರೆ ಸಾವಿಗೆ ಶರಣಾಗಿರುವ ವಿದ್ಯಾರ್ಥಿನಿ ದೀಪ್ತಿ, ಬಿಜೆಪಿ ಕಾರ್ಯಕರ್ತನ ವಿರುದ್ಧ ಡೆತ್ನೋಟ್ನಲ್ಲಿ ಗಂಭೀರ ಆರೋಪ ಮಾಡಿದ್ದಾಳೆ. ಬಿಜೆಪಿ ಕಾರ್ಯಕರ್ತ ನಿತೇಶ್ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ.
ಈ ಬಗ್ಗೆ ದೂರು ನೀಡಲು ಹೋದರೆ ಕುದುರೆಮುಖ ಪೊಲೀಸರು ಸ್ವೀಕರಿಸಿಲ್ಲ ಎನ್ನಲಾಗಿದೆ. ಇದರಿಂದ ನೊಂದ ಪೋಷಕರು, ಎಸ್ಪಿ ಮೊರೆ ಹೋಗಿದ್ದಾರೆ. ಕೊನೆಗೆ ಕುದುರೆಮುಖ ಪೊಲೀಸರಿಗೆ ಎಸ್ಪಿ ಕ್ಲಾಸ್ ತೆಗೆದುಕೊಂಡಿದ್ದಾರೆ. ತೀವ್ರ ತರಾಟೆ ಬಳಿಕ ಪೊಲೀಸರು ನಿತೇಶ್ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.