ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ರಾನ್ಸ್‌ನಲ್ಲಿ 18ರಿಂದ 25 ವರ್ಷದ ಮಕ್ಕಳಿಗೆ ಕಾಂಡೋಮ್‌ ಫ್ರೀ

Twitter
Facebook
LinkedIn
WhatsApp
ಫ್ರಾನ್ಸ್‌ನಲ್ಲಿ 18ರಿಂದ 25 ವರ್ಷದ ಮಕ್ಕಳಿಗೆ ಕಾಂಡೋಮ್‌ ಫ್ರೀ

ಪ್ಯಾರಿಸ್: ಯುವಜನರಲ್ಲಿ ಅನಗತ್ಯ ಗರ್ಭಧಾರಣೆಯನ್ನು ಕಡಿಮೆ ಮಾಡಲು, 18ರಿಂದ 25 ವರ್ಷ ವಯಸ್ಸಿನವರಿಗೆ ಉಚಿತವಾಗಿ ಕಾಂಡೋಮ್‌ (Condom free) ಒದಗಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ಫಾರ್ಮಸಿಗಳು 18ರಿಂದ 25 ವರ್ಷ ವಯಸ್ಸಿನವರಿಗೆ ಫ್ರೀಯಾಗಿ ಕಾಂಡೋಮ್ ನೀಡುತ್ತವೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಘೋಷಿಸಿದ್ದಾರೆ. ‘ಇದು ಗರ್ಭನಿರೋಧಕಕ್ಕೆ ಒಂದು ಸಣ್ಣ ಕ್ರಾಂತಿಯಾಗಿದೆ’ ಎಂದು ಫಾಂಟೈನ್-ಲೆ-ಕಾಮ್ಟೆಯಲ್ಲಿ ಆರೋಗ್ಯ (Health) ಚರ್ಚೆಯಲ್ಲಿ ಮ್ಯಾಕ್ರನ್ ಹೇಳಿದರು. ಔಷಧಾಲಯಗಳಲ್ಲಿ (Pharmacy), ಜನವರಿ 1ರಿಂದ 18ರಿಂದ 25 ವರ್ಷ ವಯಸ್ಸಿನವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮ್ಯಾಕ್ರನ್ ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ತಿಳಿಸಿದರು. 

ಲೈಂಗಿಕ ರೋಗಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ
ಲೈಂಗಿಕವಾಗಿ ಹರಡುವ ರೋಗಗಳ (ಎಸ್‌ಟಿಡಿ) ಹರಡುವಿಕೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ಮುಂದಿನ ವರ್ಷದಿಂದ ಫ್ರಾನ್ಸ್‌ನ ಯುವಜನರು ಕಾಂಡೋಮ್‌ಗಳನ್ನು ಉಚಿತವಾಗಿ ಪಡೆಯಬಹುದು ಎಂದು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಾಹಿತಿ ನೀಡಿದ್ದಾರೆ. X-ರೇಟೆಡ್ ಚಲನಚಿತ್ರ ಪ್ರೇಮಿಗಳಲ್ಲಿ ಕಾಂಡೋಮ್‌ಗಳ ಬಳಕೆಯನ್ನು ಉತ್ತೇಜಿಸುವ ಮತ್ತು HIV ಹರಡುವಿಕೆಯನ್ನು ತಡೆಗಟ್ಟುವ ಅಭಿಯಾನದ ಭಾಗವಾಗಿ, ಫ್ರೆಂಚ್ ಸರ್ಕಾರವು 1998ರಲ್ಲಿ ಐದು ಕಿರು ಕಾಮಪ್ರಚೋದಕ ಚಲನಚಿತ್ರಗಳನ್ನು ನಿಯೋಜಿಸಿತ್ತು. ಪ್ರತಿ ಐದರಿಂದ ಎಂಟು ನಿಮಿಷಗಳ ಚಲನಚಿತ್ರದಲ್ಲಿ ವಿಭಿನ್ನ ಸನ್ನಿವೇಶವನ್ನು ಪ್ರದರ್ಶಿಸಲಾಯಿತು. 

ಬೆಂಗಳೂರಿನ ಶಾಲಾ ಕಾಲೇಜಿನ ಮಕ್ಕಳ ಬ್ಯಾಗ್‌ನಲ್ಲಿ ಕಾಂಡೋಮ್ ಪತ್ತೆ
ಇತ್ತೀಚಿಗಷ್ಟೇ ಬೆಂಗಳೂರಿನಲ್ಲಿ ಶಾಲಾ-ಕಾಲೇಜಿನ ಮಕ್ಕಳ ಬ್ಯಾಗ್‌ ಪರಿಶೀಲಿಸಿದ ಸಂದರ್ಭ ಕಾಂಡೋಮ್‌, ಅನಗತ್ಯ ಗರ್ಭಧಾರಣೆ ತಡೆಯುವ ಮಾತ್ರೆಗಳು ಪತ್ತೆಯಾಗಿದ್ದವು. ಹೀಗಾಗಿ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ತರಗತಿಯನ್ನು ಆಯೋಜಿಸಿತ್ತು. 

ನಗರದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಬ್ಯಾಗ್ ಪರಿಶೀಲನೆಗೆ ಇಳಿದ ಶಾಲಾ ಶಿಕ್ಷಕರಿಗೆ ಹಲವು ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೋಮ್ ಹಾಗೂ ಗರ್ಭ ನಿರೋಧಕ ಮಾತ್ರೆಗಳು ಪತ್ತೆಯಾಗಿತ್ತು. ಇದರ ಜೊತೆಗೆ ಸಿಗರೇಟ್, ಲೈಟರ್, ಫೆವಿಕಾಲ್ ಮುಂತಾದ ವಸ್ತುಗಳು ಸಹ ಸಿಕ್ಕಿವೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಬ್ಯಾಗ್ ಗಳಲ್ಲಿ ಕಾಂಡೋಮ್, ಗರ್ಭ ನಿರೋಧಕ‌ ಮಾತ್ರೆ ಪತ್ತೆಯಾಗಿದ್ದು, ಈ ಬಗ್ಗೆ ಎಚ್ಚರವಹಿಸುವಂತೆ ಶಾಲಾ ಆಡಳಿತ ಮಂಡಳಿಗಳು ಪೋಷಕರಿಗೆ ಸೂಚನೆ ನೀಡಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ