ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಜಕ್ರಿಬೆಟ್ಟುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು!

Twitter
Facebook
LinkedIn
WhatsApp
Picsart 23 04 12 21 47 57 849

ಬಂಟ್ವಾಳ; ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ.ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ  ಸಂಭವಿಸಿದೆ.ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.

 

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು,ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಒಳಗಾದ ಸ್ಥಳದಲ್ಲಿ ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತು ಆದರೂ ದಾರಿ ಮಧ್ಯೆ ಈತ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಸಿರೋಡು -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಮಗಾರಿ ಮುಗಿದ ಅಗಲೀಕರಣಗೊಂಡ ಬಳಿಕ ಈ ಭಾಗದಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದಲ್ಲದೆ ಸಾವುನೋವುಗಳು ಸಂಭವಿಸಿದವು. ಇತ್ತೀಚಿನ ದಿನಗಳಲ್ಲಿ ಇದೊಂದು ‌ಅಪಘಾತವಲಯವಾಗಿ‌ ಮಾರ್ಪಾಡುಗೊಂಡಿರುವ ಬಗ್ಗೆ ವಾಹನ ಸವಾರರಿಗೆ ನಡುಕ ಉಂಟಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ