ಬಂಟ್ವಾಳ :ಫರ್ಲಾ ಚರ್ಚ್ ಬಳಿ ಕಾರುಗಳ ನಡುವೆ ಭೀಕರ ಅಪಘಾತ - ನಾಲ್ವರಿಗೆ ಗಾಯ!
ಬಂಟ್ವಾಳ: ಚರ್ಚ್ ಗೆ ಪೂಜೆಗೆಂದು ಬರುವ ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ.
ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಯ ರಭಸಕ್ಕೆ ಒಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಬೇಟಿ ನೀಡಿದ್ದಾರೆ.