ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು

Twitter
Facebook
LinkedIn
WhatsApp
file75576fzir5jnyfgxhho1583353431 3

ಲಂಡನ್: ಕಾರೊಂದು (Car) ಬಸ್ ನಿಲ್ದಾಣಕ್ಕೆ (Bus Stand) ಡಿಕ್ಕಿ ಹೊಡೆದ ಪರಿಣಾಮ ಅಲ್ಲಿದ್ದ ಭಾರತೀಯ (Indian) ಮೂಲದ 28 ವರ್ಷದ ವಿದ್ಯಾರ್ಥಿನಿಯೊಬ್ಬಳು (Student) ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಇಂಗ್ಲೆಂಡ್‌ನಲ್ಲಿ (England) ನಡೆದಿದೆ.

ಅತಿರಾ ಅನಿಲ್ ಕುಮಾರ್ ಲಾಲಿ ಕುಮಾರಿ ಮೃತಪಟ್ಟ ವಿದ್ಯಾರ್ಥಿನಿ. ಅತಿರಾ ಕೇರಳದ (Kerala) ತಿರುವನಂತಪುರದವರಾಗಿದ್ದು, ಕಳೆದ ತಿಂಗಳು ಲೀಡ್ಸ್ ಬೆಕೆಟ್ ವಿಶ್ವವಿದ್ಯಾಲಯದಲ್ಲಿ ತಮ್ಮ ಅಧ್ಯಯನವನ್ನು ಪ್ರಾರಂಭಿಸಿದ್ದರು ಎಂದು ತಿಳಿದು ಬಂದಿದೆ.

ಕಪ್ಪು ಬಣ್ಣದ ವೋಕ್ಸ್‌ವ್ಯಾಗನ್ ಗಾಲ್ಫ್ ಕಾರು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ಹಾನಿಯುಂಟುಮಾಡಿತ್ತು. ಈ ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರು ಪಾದಾಚಾರಿಗಳಲ್ಲಿ ಅತಿರಾ ಕೂಡ ಒಬ್ಬರು ಎಂದು ಪಶ್ಚಿಮ ಯಾರ್ಕ್‌ಷೈರ್‌ನ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಅಪಘಾತದಲ್ಲಿ ಗಾಯಗೊಂಡ 40ರ ಹರೆಯದ ಇನ್ನೊಬ್ಬ ಪಾದಾಚಾರಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ವೋಕ್ಸ್‌ವ್ಯಾಗನ್ ಗಾಲ್ಫ್ ಕಾರನ್ನು ಚಲಾಯಿಸುತ್ತಿದ್ದ ಮಹಿಳೆಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

 

ಸಂತ್ರಸ್ತೆ ಕುಟುಂಬಕ್ಕೆ ನೆರವನ್ನು ನೀಡುವ ಸಲುವಾಗಿ ಈ ಪ್ರಕರಣವನ್ನು ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ