ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಕಿಯ ಮೇಲೆ ಆ್ಯಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಗೌತಮ್ ಗಂಭೀರ್

Twitter
Facebook
LinkedIn
WhatsApp
ಬಾಲಕಿಯ ಮೇಲೆ ಆ್ಯಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಗೌತಮ್ ಗಂಭೀರ್

ನವದೆಹಲಿ: ಶಾಲೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿದ (Acid Attack) ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ (Gautam Gambhir) ಒತ್ತಾಯಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆ್ಯಸಿಡ್ ಎರಚುವಂತಹ ಪ್ರಕರಣಗಳಲ್ಲಿ ಪಾಲ್ಗೊಳ್ಳುವವರಲ್ಲಿ ಭಯವನ್ನು ಹುಟ್ಟು ಹಾಕುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಅವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ತಿಳಿಸಿದರು.

ಬುಧವಾರ ಪಶ್ಚಿಮ ದೆಹಲಿಯಲ್ಲಿ ಇಬ್ಬರು ಬೈಕ್‍ನಲ್ಲಿ ಬಂದ ಮುಸುಕುಧಾರಿಗಳಿಂದ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಘಟನೆ ನಡೆದು ಗಂಟೆಗಳೊಳಗೆ, ಆಕೆಯ ನೆರೆ ಮನೆಯಾತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಬಾಲಕಿಗೆ ಮುಖದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಕೆ ಸಫ್ದರ್‍ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ