ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್​ವೈ ಅವರ ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ, ತಪ್ಪೇನಿದೆ?-ಹೆಚ್​ಡಿಕೆ

Twitter
Facebook
LinkedIn
WhatsApp
ಬಿಎಸ್​ವೈ ಅವರ ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ, ತಪ್ಪೇನಿದೆ?-ಹೆಚ್​ಡಿಕೆ

ಬೆಂಗಳೂರು: ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿರುವುದು ಸರಿಯಷ್ಟೇ. ಈ ಬಗ್ಗೆ ನಾನು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ನಮ್ಮ ಪಕ್ಷದ ಅಭಿಪ್ರಾಯ ಹೇಳಿದ್ದೇನೆ. ಆದರೆ, ಆ ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ನಾನು ಹೇಳಿಲ್ಲ. ಆದರೆ ಬೆಂಬಲ ಕೇಳಿದ ಯಡಿಯೂರಪ್ಪ ಅವರ ಬಗ್ಗೆ ರಾಜಕೀಯವನ್ನು ಹೊರತುಪಡಿಸಿ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ. ಇದರಲ್ಲಿ ತಪ್ಪೇನಿದೆ..? ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದಾಕ್ಷಣ ಜೆಡಿಎಸ್ ಪಕ್ಷವೂ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ. ಚಿಕ್ಕಬಳ್ಳಾಪುರದಲ್ಲಿ ನಾನು ಕೊಟ್ಟ ಹೇಳಿಕೆಯನ್ನು ಮತ್ತೊಮ್ಮೆ ಗಮನಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಪಕ್ಷದ ನಾಯಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪ್ರತೀ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ. ಕಾಂಗ್ರೆಸ್ಸಿನ ಮಂಡ್ಯ, ಕೊಡಗು ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಯಾರು ಕೊಡಿಸಿದರು ಎನ್ನುವುದನ್ನು ಸ್ವತಃ ಸಹಕಾರ ಸಚಿವರೇ ಹೇಳಿದ್ದಾರೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ? ನಮ್ಮನ್ನು ಬಿಜೆಪಿ ಬಿ ಟೀಮ್ ಎನ್ನುವವರೇ ಉತ್ತರಿಸಬೇಕು ಎಂದಿದ್ದಾರೆ.

ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿರುವುದು ಸರಿಯಷ್ಟೇ. ಈ ಬಗ್ಗೆ ನಾನು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ನಮ್ಮ ಪಕ್ಷದ ಅಭಿಪ್ರಾಯ ಹೇಳಿದ್ದೇನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು