ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

Twitter
Facebook
LinkedIn
WhatsApp
CM Nimbannavar 768x432 1

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಮಾಜಿ (BJP) ಶಾಸಕ ಸಿ.ಎಂ ನಿಂಬಣ್ಣವರ್ (77) (CM Nimbannavar) ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಕಲಘಟಗಿ (Kalaghatgi) ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು, ಕಾಲು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಬೆಳಗ್ಗೆ 11:10 ರ ಸಮಯಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಕಲಘಟಗಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ. 

ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು.

ಇಂಗ್ಲಿಷ್ ವಿಷಯದಲ್ಲಿ ಬಿಎ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಅವರು ಪಡೆದಿದ್ದರು. ಅಲ್ಲದೇ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇಡಿ ಪದವಿಯನ್ನೂ ಪಡೆದಿದ್ದ ಅವರು ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು. ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ 1970ರಲ್ಲಿ ಇಂಗ್ಲಿಷ್ ಶಿಕ್ಷಕರಾಗಿದ್ದರು. ಬಳಿಕ ಇಲ್ಲಿಯೇ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಹೊಂದಿದ್ದರು. ಮುಂದೆ ಇದೇ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಇವರಿಗೆ ಶಿಕ್ಷಣ ಇಲಾಖೆಯಿಂದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಸಹ ಲಭಿಸಿತ್ತು. 10 ವರ್ಷಗಳ ಸೇವಾವಧಿ ಬಾಕಿ ಇರುವಾಗಲೇ (1994 ಸೆಪ್ಟೆಂಬರ್ 30ರಂದು) ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರು.

ಬಳಿಕ ವಕೀಲ ವೃತ್ತಿಯನ್ನು ಆರಂಭಿಸಿದ್ದ ಅವರು, ಕಲಘಟಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಅನೇಕ ಮೊಕದ್ದಮೆಗಳನ್ನು ಕೈಗೆತ್ತಿಕೊಂಡು ರಾಜಿ ಮೂಲಕ ಬಗೆಹರಿಸಿದ್ದರು. ಇದು ಅವರಿಗೆ ಈ ಭಾಗದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ವಕೀಲರ ಸಂಘದ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿದ್ದರು. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಸಿ.ಎಂ. ನಿಂಬಣ್ಣವರ್ 1995ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. 27 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದ ಅವರು, ಕಲಘಟಗಿ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯನ್ನು ಮಾಡಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇವರು ಗೆಲುವು ಸಾಧಿಸಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಇವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಾಲಿ ಶಾಸಕರಾಗಿದ್ದರೂ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೆಲವೇ ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಾಗರಾಜ ಛಬ್ಬಿಗೆ ಬಿಜೆಪಿ ಟಿಕೆಟ್ ಕೊಟ್ಟಿತ್ತು. ಆದರೆ ಅವರು ಈ ಬಾರಿ ಸೋಲು ಕಂಡಿದ್ದರು. ತಮಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ಸಿ.ಎಂ. ನಿಂಬಣ್ಣವರ್ ಹಲವಾರು ಬಾರಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist