ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

Twitter
Facebook
LinkedIn
WhatsApp
madal virupakshappa 3
 

ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ