ಬೆಂಗಳೂರು: ದೀರ್ಘಕಾಲದಿಂದ ಸಿನಿಮಾ ಪ್ರೇಮಿಗಳು ಕಾತರದಿಂದ ಕಾದಿದ್ದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಮಾರ್ಚ್ 3ರಿಂದ ಆರಂಭವಾಗಲಿದೆ. ಈ ಕುರಿತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಜಿಕೆವಿಕೆ ಸಭಾಂಗಣದಲ್ಲಿ ಮಾರ್ಚ್ 3ರಂದು ಚಿತ್ರೋತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಮಾರ್ಚ್ 10ರಂದು ಟಾಟಾ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ, ಹಿಂದಿ ಚಿತ್ರರಂಗದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಕಳೆದ ಎರಡು ವರ್ಷಗಳ ಸಿನಿಮಾಗಳ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 55 ರಾಷ್ಟ್ರಗಳ 200 ಚಿತ್ರಗಳು ಈ ಬಾರಿ ಪ್ರದರ್ಶನಗೊಳ್ಳಲಿವೆ. ಮಾರ್ಚ್ 4ರಿಂದ ಒರಾಯನ್ ಮಾಲ್ನಲ್ಲಿರುವ ಪಿವಿಆರ್ ಸಿನಿಮಾದ 11 ಪರದೆಗಳಲ್ಲಿ, ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಸಿನಿ ಅಕಾಡೆಮಿಯಲ್ಲಿ ಹಾಗೂ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದ ಡಾ.ರಾಜ್ ಭವನದಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist