ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು: ಅದೃಷ್ಟ ಬರುತ್ತೆ ಅಂತ ಪ್ರಾಚೀನ ವಸ್ತು ಮಾರಲು ಯತ್ನ, ಇಬ್ಬರ ಬಂಧನ

Twitter
Facebook
LinkedIn
WhatsApp
ಬೆಂಗಳೂರು: ಅದೃಷ್ಟ ಬರುತ್ತೆ ಅಂತ ಪ್ರಾಚೀನ ವಸ್ತು ಮಾರಲು ಯತ್ನ, ಇಬ್ಬರ ಬಂಧನ

ಬೆಂಗಳೂರು(ಡಿ.02):  ಮನೆಗೆ ಅದೃಷ್ಟದ ತರುತ್ತವೆ ಎಂದು ಹೇಳಿ ಪ್ರಾಚೀನ ಕಾಲದ ದೇವರ ವಿಗ್ರಹ ಸೇರಿದಂತೆ ಕೆಲ ವಸ್ತುಗಳ ಮಾರಾಟದ ನೆಪದಲ್ಲಿ ಸಾರ್ವಜನಿಕರಿಗೆ ವಂಚಿಸಲು ಯತ್ನಿಸಿದ್ದ ಇಬ್ಬರನ್ನು ವೈಯಾಲಿಕಾವಲ್‌ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭಾಗ್ಯಜ್ಯೋತಿ ನಗರದ ಮಹಮ್ಮದ್‌ ಮುಸ್ತಾಫ ಹಾಗೂ ಮೊಹಮ್ಮದ್‌ ಮುಬೀನ್‌ ಬಂಧಿತರಾಗಿದ್ದು, ಆರೋಪಿಗಳಿಂದ ಹಳೆಯ ಕಾಲದ ನಂದಿ ವಿಗ್ರಹ, ಬೈನಾಕುಲರ್‌, ಬಿಂದಿಗೆ ಹಾಗೂ ನಾಣ್ಯಗಳು ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೆಲ ದಿನಗಳ ಹಿಂದೆ ಆರೋಪಿಗಳು ಜನರಿಗೆ ವಂಚಿಸಲು ಯತ್ನಿಸಿರುವ ಬಗ್ಗೆ ಸಿಕ್ಕ ಮಾಹಿತಿ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಬಳಿ ಇರುವ ಪ್ರಾಚೀನ ಕಾಲದ ನಂದಿ ವಿಗ್ರಹದಲ್ಲಿ ದಿವ್ಯ ಶಕ್ತಿ ಇದೆ. ಅಲ್ಲದೆ ನಾಣ್ಯಗಳು, ಬೈನಾಕುಲರ್‌ ಸೇರಿದಂತೆ ಈ ವಸ್ತುಗಳನ್ನು ಮನೆಯಲ್ಲಿ ಇಟ್ಟರೆ ಅದೃಷ್ಟಬರುತ್ತ ದೆ ಎಂದು ಹೇಳಿ ಜನರಿಂದ ಕೋಟ್ಯಂತರ ರುಪಾಯಿ ವಸೂಲಿ ಮಾಡಿ ಆರೋಪಿಗಳು ವಂಚಿಸಲು ಯತ್ನಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ