ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!

Twitter
Facebook
LinkedIn
WhatsApp
ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ (Actress Murder) ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು (Vidhya Nandish) ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ. ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

ವಿದ್ಯಾ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist