ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭದ್ರಾವತಿ: ಬೀದಿ ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು

Twitter
Facebook
LinkedIn
WhatsApp
ಭದ್ರಾವತಿ: ಬೀದಿ ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು

ಶಿವಮೊಗ್ಗ(ಡಿ.01):  ಬೀದಿ ನಾಯಿಗಳ ದಾಳಿಗೆ ಗಾಯಗೊಂಡಿದ್ದ 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಸೈಯದ್ ಮದನಿ ಎಂಬಾತನೇ ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. 

ನಿನ್ನೆ(ಬುಧವಾರ) ಸಂಜೆ  4 ಗಂಟೆ ಸುಮಾರಿಗೆ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ತಂದೆಯನ್ನ ಹಿಂಬಾಲಿಸಿಕೊಂಡು ಹೋಗುವಾಗ 7 ರಿಂದ 8 ಬೀದಿ ನಾಯಿಗಳ ಹಿಂಡು ಬಾಲಕನ ಮೇಲೆ ದಾಳಿ ಮಾಡಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥತೆಯಿಂದ ಬಳಲಿದ ಬಾಲಕನನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೈಯದ್ ಮದನಿ ಸಾವನಪ್ಪಿದ್ದಾನೆ.

ನಾಯಿಗಳ ದಾಳಿಯ ವೇಳೆ ಬಾಲಕನ ತಂದೆ ಸ್ವಲ್ಪ ದೂರದಲ್ಲಿ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದ, ಯಂತ್ರದ ಶಬ್ದಕ್ಕೆ ನಾಯಿ ದಾಳಿ ತಿಳಿಯದೆ ಬಾಲಕನನ್ನ ಕಳೆದುಕೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ