ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಶಿಖರ್ ಧವನ್

IPL 2023 RR vs PBKS: ಗುವಾಹಟಿಯಲ್ಲಿ ನಡೆದ ಐಪಿಎಲ್ನ 8ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ವಿಶೇಷ ಈ ದಾಖಲೆಯ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಬರೆದಿರುವ ರೆಕಾರ್ಡ್ ಅನ್ನು ಸರಿಗಟ್ಟಿದ್ದಾರೆ.
ಅಲ್ಲದೆ ಈ ಸಾಧನೆ ಮಾಡಿದ ಬ್ಯಾಟರ್ಗಳ ಪಟ್ಟಿಯಲ್ಲಿರುವ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದರು. ಅಂದರೆ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ 50 ಬಾರಿ ಫಿಫ್ಟಿ ಪ್ಲಸ್ ರನ್ ಕಲೆಹಾಕಿದ್ದಾರೆ.

ಇದೀಗ ಶಿಖರ್ ಧವನ್ ಕೂಡ 50 ಬಾರಿ ಅರ್ಧಶತಕಕ್ಕಿಂತ ಹೆಚ್ಚು ಕಲೆಹಾಕಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಕೊಹ್ಲಿಯ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಧವನ್ ಪಾತ್ರರಾದರು.
ಅಷ್ಟೇ ಅಲ್ಲದೆ ಕಡಿಮೆ ಇನಿಂಗ್ಸ್ ಮೂಲಕ ಅತೀ ಹೆಚ್ಚು 50+ ಸ್ಕೋರ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೊಹ್ಲಿ 216 ಇನಿಂಗ್ಸ್ ಮೂಲಕ ಈ ಸಾಧನೆ ಮಾಡಿದರೆ, ಶಿಖರ್ ಧವನ್ ಕೇವಲ 207 ಇನಿಂಗ್ಸ್ಗಳಲ್ಲಿ 50 ಬಾರಿ 50+ ಸ್ಕೋರ್ಗಳಿಸಿದ್ದಾರೆ. ಈ ಮೂಲಕ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ ಐಪಿಎಲ್ನಲ್ಲಿ ಒಟ್ಟು 60 ಬಾರಿ 50+ ಸ್ಕೋರ್ಗಳಿಸಿ ಮಿಂಚಿದ್ದಾರೆ.

ಬೆಳ್ಳಂ ಬೆಳಗ್ಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಕಾಲೇಜು ಬಳಿ ಸರಣಿ ಅಪಘಾತವಾಗಿದೆ. ಕ್ಯಾಂಟರ್ ಚಾಲಕ ದಿಡೀರ್ ಬ್ರೇಕ್ ಹಾಕಿದ್ದು, ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಟಿಟಿ ವಾಹನ ಹಾಗೂ ಪಲ್ಸರ್ ಬೈಕ್ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜುಗುಜ್ಜಾಗಿದೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.